ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಲೈಓವರ್‌ ನಿರ್ಮಾಣಕ್ಕೆ ಆಗ್ರಹ

ನೂಲ್ವಿ ಸಮೀಪ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ
Last Updated 11 ಜೂನ್ 2022, 15:52 IST
ಅಕ್ಷರ ಗಾತ್ರ

ಹುಬ್ಬಳ್ಳಿ: ತಾಲ್ಲೂಕಿನ ನೂಲ್ವಿ ಕ್ರಾಸ್‌ ಬಳಿ ಫ್ಲೈಓವರ್‌ ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರತ್ನ ಭಾರತ ರೈತ ಸಮಾಜದ ವತಿಯಿಂದ ಶುಕ್ರವಾರ ನೂಲ್ವಿ ಸಮೀಪ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಸಂಘದ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ಹೇಮನಗೌಡ ಬ. ಬಸನಗೌಡ್ರ ಮಾತನಾಡಿ, ‘2019ರಲ್ಲಿ ಇಬ್ಬರು, 2020ರಲ್ಲಿ ಒಬ್ಬರು, 2021ರಲ್ಲಿ ಮೂವರು ಈ ಸ್ಥಳದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಈ ವರ್ಷ 8 ಮಂದಿ ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಇಬ್ಬರು ರೈತರು ಸಹ ಮೃತಪಟ್ಟಿದ್ದಾರೆ. ನೂಲ್ವಿ, ಬೆಳಗಲಿ ರೈತರು ಜಮೀನಿಗೆ ತೆರಳಲು ಈ ಹೆದ್ದಾರಿ ದಾಟಬೇಕಿದ್ದು, ವೇಗವಾಗಿ ಸಂಚರಿಸುವ ವಾಹನಗಳಿಂದ ಅಪಾಯ ಕಟ್ಟಿಟ್ಟಬುತ್ತಿಯಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ವಾಹನ ದಟ್ಟಣೆ ಉಂಟಾಗಿದ್ದರಿಂದ ಪ್ರತಿಭಟನಾಕಾರರನ್ನು ಪೊಲೀಸರು ಬಲವಂತವಾಗಿ ಹೆದ್ದಾರಿ ಪಕ್ಕಕ್ಕೆ ಕರೆತಂದರು. ಈ ವೇಳೆ ವಾಗ್ವಾದ ನಡೆಯಿತು.

ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಸ್ಥಳಕ್ಕಾಗಮಿಸಿ, ಒಂದು ತಿಂಗಳಲ್ಲಿ ಫ್ಲೈಓವರ್‌ ಕಾಮಗಾರಿ ಆರಂಭಿಸುವ ಭರವಸೆ ನೀಡಿದರು. ಅಲ್ಲಿವರೆಗೆ ಈ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ, ಇಬ್ಬರು ಪೊಲೀಸರನ್ನು ನಿಯೋಜಿಸುವುದಾಗಿ ತಿಳಿಸಿದರು. ಇದರಿಂದ ಪ್ರತಿಭಟನೆ ಹಿಂಪಡೆಯಲಾಯಿತು. ಗಡುವಿನೊಳಗೆ ಕಾಮಗಾರಿ ಆರಂಭಿಸದಿದ್ದರೆ ನಿರಂತರವಾಗಿ ಧರಣಿ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಕಲ್ಲಪ್ಪ ಹುಲಗೇರಿ, ಚಂದ್ರಗೌಡ ದೊಡ್ಡಮನಿ, ಗುರುಸಿದ್ಧಗೌಡ, ಮಲ್ಲನ ಗೌಡ ಜೀವನಗೌಡ್ರ, ಮಂಜುನಾಥ ಕಾಲವಾಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT