ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಣ್ಣ ಹುತಾತ್ಮ ದಿನಾಚರಣೆ ಜ. 26ಕ್ಕೆ

Last Updated 24 ಜನವರಿ 2021, 12:15 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆಯನ್ನು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಜ. 26ರಂದು ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ’ ಎಂದು ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷ ಶಿವಾನಂದ ಮುತ್ತಣ್ಣವರ ಹೇಳಿದರು.

‘ಕಾರ್ಯಕ್ರಮದಲ್ಲಿ 33 ಮಂದಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ನೀಡಲಾಗುವುದು. ರಾಜಗುರು ಮೆಲೋಡೀಸ್ ತಂಡದವರು ದೇಶಭಕ್ತಿ ಗೀತೆ ಮತ್ತು ನಾಡಗೀತೆ ಪ್ರಸ್ತುತಪಡಿಸುವರು. ಕುಂದಗೋಳ ತಾಲ್ಲೂಕಿನ ಕಮಡೊಳ್ಳಿ ಗ್ರಾಮದ ಸಿದ್ಧಾರೂಢ ಹೂಗಾರ ನೇತೃತ್ವದಲ್ಲಿ ಮಲ್ಲಕಂಬ ಪ್ರದರ್ಶನ ಏರ್ಪಡಿಸಲಾಗಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಕುಸುಮಾವತಿ ಶಿವಳ್ಳಿ, ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ ಪಾಲ್ಗೊಳ್ಳುವರು. ಇದೇ ಸಂದರ್ಭದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ಹೆಸರು ನಾಮಕರಣ ಮಾಡಬೇಕು ಎಂದು ಆಗ್ರಹಿಸಿ, ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು’ ಎಂದರು.

ಸ್ವಾಗತ ಸಮಿತಿ ಸದಸ್ಯರಾದ ಕೆ.ಬಿ. ಕೋರಿ, ಹನುಮಂತ ಬುರ್ಲಿ, ಮಹಾಂತೇಶ ವಿ. ಹಾಗೂ ಕಿರಣ ಬೆಟಗೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT