ಗುರುವಾರ , ಜನವರಿ 27, 2022
21 °C
ಮುಖ್ಯಮಂತ್ರಿಗೆ ಸಭಾಪತಿ ಹೊರಟ್ಟಿ ಪತ್ರ

ಗಡಿಯಲ್ಲಿ ಕನ್ನಡ ಶಾಲೆ- ನಿಯಮ ಸಡಿಲಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ಬೆಳಗಾವಿಯ ಗಡಿಭಾಗದಲ್ಲಿ ಕನ್ನಡ ಮಾಧ್ಯಮ ಪ್ರೌಢಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ನಿಯಮಗಳನ್ನು ಸಡಿಲಗೊಳಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ಮಾಡಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಜ.3ರಂದು ಪ್ರಕಟವಾಗಿರುವ ‘ಕನ್ನಡ ಮಾಧ್ಯಮ ಪ್ರೌಢಶಾಲೆಯೇ ಇಲ್ಲ!’ ಎಂಬ ವಿಶೇಷ ವರದಿ ಉಲ್ಲೇಖಿಸಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

‘ಗಡಿಭಾಗದ ಮಕ್ಕಳು ಕನ್ನಡ ಕಲಿಕೆಯಿಂದ ವಂಚಿತರಾದರೆ, ಆ ಭಾಗದಲ್ಲಿ ಕನ್ನಡ ನಶಿಸುತ್ತದೆ. ಇದಕ್ಕೆ ಸರ್ಕಾರವೇ ಕಾರಣವಾದಂತಾಗುತ್ತದೆ. ಶಾಲೆ ಆರಂಭಿಸಲು 70 ವಿದ್ಯಾರ್ಥಿಗಳಿರಬೇಕು ಹಾಗೂ ಐದು ಕಿ.ಮೀ ವ್ಯಾಪ್ತಿಯಲ್ಲಿ ಬೇರೆ ಪ್ರೌಢಶಾಲೆ ಇರಬಾರದು ಎಂಬ ನಿಯಮವಿದೆ. ಈ ನಿಯಮಗಳನ್ನು ಸಡಿಲಗೊಳಿಸಬೇಕು‘ ಎಂದು ಹೇಳಿದ್ದಾರೆ.

‘ಈ ವಿಷಯದ ಬಗ್ಗೆ ವೈಯಕ್ತಿಕವಾಗಿ ಗಮನಹರಿಸಬೇಕು. ಉಚಗಾವಿ, ಹಿಂಡಲಗಾ ಹಾಗೂ ಕುದ್ರೇಮನಿಯಲ್ಲಿ ಶಾಲೆ ಆರಂಭಕ್ಕೆ ಸಲ್ಲಿಕೆಯಾಗಿರುವ ಪ್ರಸ್ತಾವಕ್ಕೆ ಅನುಮತಿ ನೀಡಬೇಕು’ ಎಂದು ಮುಖ್ಯಮಂತ್ರಿಯವರಿಗೆ ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.