ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ: ಕಠಿಣ ಶಿಕ್ಷೆಗೆ ಆಗ್ರಹ 

Published 14 ಜೂನ್ 2024, 16:29 IST
Last Updated 14 ಜೂನ್ 2024, 16:29 IST
ಅಕ್ಷರ ಗಾತ್ರ

ನವಲಗುಂದ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಆರೋಪದಡಿ ಬಂಧನವಾಗಿರುವಂತಹ  ನಟ ದರ್ಶನ ಹಾಗೂ ಸಹಚರರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಅಧ್ಯಕ್ಷ ಮಾಬುಸಾಬ ಯರಗುಪ್ಪಿ ಮಾತನಾಡಿ , ನಟ ದರ್ಶನ ಅವರ ಮೇಲೆ ರೌಡಿ ಶೀಟರ್ ಓಪನ್ ಮಾಡಬೇಕು. ರಾಜ್ಯ ಸರ್ಕಾರ ಈ ಕೂಡಲೇ ಮೃತನ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು. ಮೃತ ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದರು.

ರಿಯಾಜಅಹ್ಮದ ನಾಶಿಪುಡಿ ಮಾತನಾಡಿ, ದರ್ಶನ ಅವರು ಎಸಗಿರುವಂತಹ ಕೃತ್ಯಕ್ಕೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಉತ್ತರ ಕರ್ನಾಟಕ ಪರಿವರ್ತನ ಸಮುದಾಯದ ಆಜಾದ ನಾಶಿಪುಡಿ, ಬಾಬುಷಾ ಮಕಾಂದಾರ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT