ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಣುಕಾಚಾರ್ಯ ಜಯಂತಿ ಆಚರಣೆ

Last Updated 20 ಮಾರ್ಚ್ 2023, 5:20 IST
ಅಕ್ಷರ ಗಾತ್ರ

ಕುಂದಗೋಳ: ರೇಣುಕಾಚಾರ್ಯರ ತತ್ವ, ಸಿದ್ಧಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪಂಚಗ್ರಹ ಹಿರೇಮಠದ ಶಿತಿಕಂಠೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಕರೋಗಲ್ ಒಣಿಯಲ್ಲಿ ಈಚೆಗೆ ಏರ್ಪಡಿಸಿದ್ದ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಮುಖಂಡ ಎಂ.ಎಸ್.ಅಕ್ಕಿ ಮಾತನಾಡಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶವನ್ನು ರೇಣುಕಾಚಾರ್ಯರು ಸಾರಿದ್ದಾರೆ. ಎಲ್ಲ ಧರ್ಮದವರು ಸಾಮರಸ್ಯದಿಂದ ಬದುಕಬೇಕು ಎಂದು ಹೇಳಿದರು.

ಬಿಜೆಪಿ ಮುಖಂಡ ಎಂ.ಆರ್.ಪಾಟೀಲ ಹಾಗೂ ಕಾಂಗ್ರೆಸ್ ಮುಂಖಡ ಅರವಿಂದ ಎಂ.ಕಟಗಿ ಮಾತನಾಡಿದರು. ಶಿವಾನಂದ ಮಠದ ಮಹಾಂತ ಸ್ವಾಮೀಜಿ ಹಾಗೂ ಕಲ್ಯಾಣಪುರ ಮಠದ ಬಸವಣ್ಣಜ್ಜನವರು ಆಶೀರ್ವಚನ ನೀಡಿದರು.

ರಂಗೋಲಿ ಸ್ಪರ್ಧೆ ಹಾಗೂ ದೇಸಿ ಸಿಹಿತಿನಿಸು ತಯಾರಿಸುವ, ವೇಷಭೂಷಣ ಸ್ಪರ್ಧೆಯಲ್ಲಿ ಜಯಗಳಿಸಿದವರಿಗೆ ಬಹುಮಾನ ವಿತರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ರೇಣುಕಾಚಾರ್ಯರ ಭಾವಚಿತ್ರದ ಮೆರವಣಿಗೆ ನಡೆಯಿತು.

ಬಿಜೆಪಿ ಮುಖಂಡ ಎಸ್.ಐ.ಚಿಕ್ಕನಗೌಡ್ರ, ಗೌಡಪ್ಪಗೌಡ ಪಾಟೀಲ, ಎಂ.ಬಿ.ಪಾಟೀಲ, ನಾಗರಾಜ ದೇಶಪಾಂಡೆ, ದಾನಪ್ಪ ಗಂಗಾಯಿ, ಸಿದ್ದಪ್ಪ ಇಂಗಳಹಳ್ಳಿ, ಕಿಟ್ಟಪ್ಪ ಭೋವಿ, ಪಟ್ಟಣ ಪಂಚಾಯಿತಿ ಸದಸ್ಯ ಮಂಜುನಾಥ ಹಿರೇಮಠ, ಅರ್ಜುನ ನಾಡಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT