ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

Last Updated 5 ಅಕ್ಟೋಬರ್ 2021, 14:21 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‌ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಬೆಂಗಾವಲು ವಾಹನ ಹತ್ತಿಸಿ ನಾಲ್ವರ ರೈತರ ಸಾವಿಗೆ ಕಾರಣರಾದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಮತ್ತು ಕೇಂದ್ರ ಸಚಿವ ಅಜಯ್‌ ಮಿಶ್ರಾ ಭೇಟಿ ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಒಟ್ಟು ಎಂಟು ಜನ ಮೃತಪಟ್ಟಿದ್ದರು. ಘಟನೆ ನಡೆದಿದ್ದುಆಕಸ್ಮಿಕ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದು ಖಂಡನೀಯ ಎಂದಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಬಂಡವಾಳಷಾಹಿಗಳ ಪರ ಹೊಂದಿರುವ ಉದಾರವಾದಿ ನೀತಿಗಳು ಸರಿಯಲ್ಲ ಎಂದರು.

ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ, ಉಪಾಧ್ಯಕ್ಷ ಬಾಬಾಜಾನ್‌ ಮುಧೋಳ, ರಮೇಶ ಭೋಸ್ಲೆ, ಬಶೀರಅಹ್ಮದ್‌ ಮುಲ್ಲಾ, ದೇವಪ್ಪ ನಾಯ್ಕರ, ಎ.ಎಸ್‌. ಫಿರ್ಜಾದೆ, ರಬ್ಬಾನಿ ಮೇಸ್ತ್ರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT