ಹುಬ್ಬಳ್ಳಿ: ಉತ್ತರ ಕರ್ನಾಟಕ ಆಟೊ ರಿಕ್ಷಾ ಚಾಲಕರ ಸಂಘ ಮತ್ತು ಹುಬ್ಬಳ್ಳಿ ಧಾರವಾಡ ಆಟೊ ಚಾಲಕರ ಒಕ್ಕೂಟ ಜುಲೈ 31ರಂದು ಕರೆ ನೀಡಿರುವ ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ಹೇಳಿದೆ.
‘ಆಟೊ ಚಾಲಕರ ಬೇಡಿಕೆ ಈಡೇರಿಕೆಗೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ಚರ್ಚಿಸಲು ಮಹಾಮಂಡಳ ಸಹಕಾರ ನೀಡಲಿದೆ. ಈ ಬಂದ್ ಅನವಶ್ಯಕ. ಇದನ್ನು ಕೈಬಿಡಬೇಕು. ಜನಪರವಾದ ‘ಶಕ್ತಿ’ ಯೋಜನೆ ವಿರೋಧಿಸುವುದು ಸರಿಯಲ್ಲ’ ಎಂದು ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.