ಶುಕ್ರವಾರ, ನವೆಂಬರ್ 27, 2020
19 °C

ಮೀಸಲಾತಿ ಹೋರಾಟ: 7ರಂದು ಪೂರ್ವಭಾವಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕುರುಬ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಬಗ್ಗೆ ಹೋರಾಟದ ಯೋಜನೆಗಳನ್ನು ರೂಪಿಸಲು ನ. 7ರಂದು ಬೆಳಿಗ್ಗೆ 11 ಗಂಟೆಗೆ ನಗರದ ಆರ್‌.ಎನ್‌. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಬೆಳಗಾವಿ ವಿಭಾಗ ಮಟ್ಟದ ಪೂರ್ವಭಾವಿ ಸಭೆ ನಡೆಯಲಿದೆ.

ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಗಿನೆಲೆ ಕರ್ನಾಟಕ ರಾಜ್ಯ ಕುರುಬ ಸಮಾಜದ ಎಸ್‌.ಟಿ. ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಸಿದ್ದಣ್ಣ ತೇಜಿ ‘ನಮ್ಮ ಸಮಾಜದ ಕೆಲವರಿಗೆ ಮಾತ್ರ ಎಸ್‌.ಟಿ. ಮೀಸಲಾತಿ ಸಿಕ್ಕಿದೆ, ಇನ್ನೂ ಕೆಲವರಿಗೆ ಸಿಕ್ಕಿಲ್ಲ. ಕುರುಬ ಸಮಾಜಕ್ಕೆ ಮೀಸಲಾತಿ ನೀಡುವಂತೆ ಹಲವಾರು ವರ್ಷಗಳಿಂದ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಕಾಗಿನೆಲೆ ಪೀಠದ ಗುರುಗಳು, ನಾಲ್ಕು ಪೀಠದ ಜಗದ್ಗುರುಗಳು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಸೇರಿ ಸಭೆ ನಡೆಸಿ ಹೋರಾಟದ ಯೋಜನೆ ರೂಪಿಸುತ್ತೇವೆ’ ಎಂದರು.

‘7ರಂದು ನಡೆಯುವ ಸಭೆಯಲ್ಲಿ ಬೆಳಗಾವಿ ವಿಭಾಗ ವ್ಯಾಪ್ತಿಯ ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಬೆಳಗಾವಿ ಜಿಲ್ಲೆಗಳ ತಲಾ 50 ಸಮಾಜದ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಸಚಿವ ಕೆ.ಎಸ್‌. ಈಶ್ವರಪ್ಪ, ಮಾಜಿ ಸಚಿವ ಎಚ್‌.ಎಂ. ರೇವಣ್ಣ, ಹೋರಾಟ ಸಮಿತಿ ಅಧ್ಯಕ್ಷ ಕೆ. ವಿರೂಪಾಕ್ಷಪ್ಪ ಮತ್ತು ರಾಜ್ಯ ಸಮಿತಿ ಪ್ರಮುಖರು ಭಾಗವಹಿಸಲಿದ್ದಾರೆ’ ಎಂದರು.

ಸಮಿತಿಯ ರಾಜ್ಯ ಸಮಿತಿ ಉಪಾಧ್ಯಕ್ಷ ಬಸವರಾಜ ಬಸಲಿಗುಂದಿ, ಜಿಲ್ಲಾ ಸಮಿತಿ ಸದಸ್ಯ ಅಣ್ಣಪ್ಪ ಓಲೇಕಾರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.