ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆಗೆ ಸ್ಪಂದಿಸುವೆ: ಶಾಸ್ತ್ರಿ ಭರವಸೆ

Last Updated 27 ಜೂನ್ 2020, 15:06 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಿಸ್ವಾರ್ಥ ಭಾವನೆಯಿಂದ ಜನರ ಸೇವೆ ಮಾಡುವ ಉದ್ದೇಶದಿಂದ ಸಾರ್ವಜನಿಕ ಕ್ಷೇತ್ರದಲ್ಲಿದ್ದೇನೆ. ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಸಿಂಡಿಕೇಟ್‌ ಸದಸ್ಯರಾಗಿ ನೇಮಕವಾದ ಶ್ರೀನಿವಾಸ ಶಾಸ್ತ್ರಿ ಭರವಸೆ ನೀಡಿದರು.

ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಎಚ್.ಎಸ್. ಕೋತಂಬ್ರಿ ವಿಜ್ಞಾನ ಸಂಸ್ಥೆಯ ಹಳೇ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಹಳೆಯ ವಿದ್ಯಾರ್ಥಿ ಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು. ಶ್ರೀನಿವಾಸ ಮೂಲತಃ ಲಿಂಗಸಗೂರು ತಾಲ್ಲೂಕಿನ ಗೆಜ್ಜಲಗಟ್ಟಿ ಗ್ರಾಮದವರು.

‘ನನ್ನ ವ್ಯಕ್ತಿತ್ವ ರೂಪಿಸುವಲ್ಲಿ ಕೆ.ಎಲ್.ಇ ಸಂಸ್ಥೆ ಬಹುದೊಡ್ಡ ಪಾತ್ರ ವಹಿಸಿದೆ. ವಿದ್ಯಾರ್ಥಿ ಹಂತದಲ್ಲಿ ಕಲಿಸಿದ ಗುರುಗಳು ಮತ್ತು ಓದಿದ ಕಾಲೇಜಿನಲ್ಲಿಯೇ ಮನಃಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು ಸ್ಮರಣೀಯ’ ಎಂದರು.

ಕಾಲೇಜಿನ ಹಳೆಯ ವಿದ್ಯಾರ್ಥಿ ಮಲ್ಲಿಕಾರ್ಜುನ ಸಾವುಕಾರ, ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ವಿಜಯಶ್ರೀ ಜಿ. ಹಿರೇಮಠ, ಪ್ರಾಚಾರ್ಯ ಡಾ. ಲಿಂಗರಾಜ ಡಿ. ಹೊರಕೇರಿ, ಪ್ರಾಧ್ಯಾಪಕಿಯರಾದ ಶ್ರುತಿ, ಪುಷ್ಪಾ, ಹಳೆಯ ವಿದ್ಯಾರ್ಥಿಗಳ ಸಂಘದ ಖಜಾಂಚಿ ಪ್ರೊ. ಸುಜಾತಾ ಎಸ್. ಪಟ್ಟೇದ, ಕಾರ್ಯದರ್ಶಿ ಪ್ರೊ.ಆರತಿ ಎಂ.ಪಿ, ಕಾಲೇಜು ಒಕ್ಕೂಟದ ಅಧ್ಯಕ್ಷ ಡಾ.ವೈ.ಎನ್. ನಾಗೇಶ, ಪಿ.ಸಿ. ಜಾಬಿನ್ ವಿಜ್ಞಾನ ಕಾಲೇಜಿನ ಗ್ರಂಥಪಾಲಕ ಬಿ.ಎಸ್. ಮಾಳವಾಡ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT