ಶುಕ್ರವಾರ, ಜನವರಿ 27, 2023
27 °C
ಸಿ.ಟಿ. ರವಿ ಹೇಳಿಕೆ ಸಮರ್ಥಿಸಿಕೊಂಡ ಶೆಟ್ಟರ್

ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದರೆ ಗಲಭೆ, ಹತ್ಯೆ: ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಳಳ್ಳಿ:‘ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಿಂದೂ-ಮುಸ್ಲಿಮರ ನಡುವೆ ಗಲಭೆಗಳಾಗಿವೆ, ಹಿಂದೂಗಳ ಹತ್ಯೆ ಸಹ ಆಗಿವೆ. ಅವರು ಮತ್ತೆ ಅಧಿಕಾರಕ್ಕೆ ಬಂದರೆ ಅದೇ ಸ್ಥಿತಿ ಮುಂದುವರಿಯುತ್ತದೆ’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ನಡೆಸಿದ 60 ವರ್ಷಗಳ ದುರಾಡಳಿತ ನೋಡಿಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿದ್ದು, ಅವರ ಹೇಳಿಕೆಯಲ್ಲಿ ತಪ್ಪೇನಿಲ್ಲ' ಎಂದು ಸಿ.ಟಿ. ಅವರ 'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತದೆ' ಎಂಬ ಮಾತನ್ನು ಸಮರ್ಥಿಸಿಕೊಂಡರು.

'ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಳಿಗ್ಗೆಯಿಂದ ಸಂಜೆಯವರಿಗೂ ಹಿಂದೂ ವಿರೋಧಿ ಟಿಪ್ಪು ಸುಲ್ತಾನ್ ಹೊಗಳುತ್ತ, ಆರ್.ಎಸ್.ಎಸ್. ಅನ್ನು ತೆಗಳುತ್ತಾರೆ. ಅದು ಅವರಿಗೆ ಸಾಮಾನ್ಯವಾಗಿದೆ. ಅಧಿಕಾರದ ಆಸೆಗೆ ಕಾಂಗ್ರೆಸ್ ಎಲ್ಲ ವೇದಿಕೆಯನ್ನೂ ದುರುಪಯೋಗ ಮಾಡಿಕೊಳ್ಳುತ್ತದೆ. ಅದೇ ರೀತಿ ಒಕ್ಕಲಿಗರ ಮೀಸಲಾತಿ ಹೋರಾಟದ ವೇದಿಕೆಯನ್ನು ಡಿ.ಕೆ. ಶಿವಕುಮಾರ ರಾಜಕೀಯ ಭಾಷಣಕ್ಕೆ ಬಳಸಿಕೊಂಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು