ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಚಿಕಿತ್ಸೆಗೆ ಸ್ಪಂದಿಸದೆ ಪವರ್ ಟಿವಿ ಕ್ಯಾಮೆರಾಮೆನ್ ಸಾವು

Last Updated 4 ಅಕ್ಟೋಬರ್ 2020, 6:10 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮೂರು ದಿನಗಳ ಹಿಂದೆ ನಗರದ ಕಾರವಾರ ರಸ್ತೆಯ ಚಾಟ್ನಿ ಕಾಂಪ್ಲೆಕ್ಸ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪವರ್ ಟಿವಿ ಕ್ಯಾಮೆರಾಮೆನ್ ಸುನೀಲ ಪಾಚಂ(29), ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್'ನಲ್ಲಿ ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ ಸುನೀಲ ಅವರು ಕರ್ತವ್ಯ ಮುಗಿಸಿ ಮನೆಗೆ ತೆರಳುವಾಗ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕಿಮ್ಸ್'ಗೆ ದಾಖಲಿಸಲಾಗಿತ್ತು.

ಸುನೀಲ‌ ಅವರ ತಲೆ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿತ್ತು. ವೈದ್ಯರು ಸಾಕಷ್ಟು ಪ್ರಯತ್ನಿಸಿದರೂ ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ಕಿಮ್ಸ್ ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT