ಅಣ್ಣಿಗೇರಿ: ಬರಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಅಣ್ಣಿಗೇರಿ ತಾಲ್ಲೂಕನ್ನು ಕೈಬಿಟ್ಟಿದ್ದಕ್ಕೆ ಸ್ಥಳೀಯ ರೈತ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಪಟ್ಟಣದಲ್ಲಿ ಕೆಲಕಾಲ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸದಿದ್ದರೆ ವಿವಿಧ ರೈತಪರ ಸಂಘಟನೆಗಳಿಂದ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ರೈತ ಮುಖಂಡ ಯಲ್ಲಪ್ಪ ಮರಬಸಿ ಹೇಳಿದರು.
ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ ಮಾತನಾಡಿದರು. ಮುಖಂಡರಾದ ಭಗವಂತಪ್ಪ ಪುಟ್ಟಣ್ಣವರ, ಶಿವಶಂಕರ ಕಲ್ಲೂರ, ಜಯದೇವ ಹೂಗಾರ, ಪ್ರಕಾಶ ಅಂಗಡಿ, ಎ.ಪಿ.ಗುರಿಕಾರ, ದಾವಲಸಾಬ ದರವಾನ, ಶೇಖಣ್ಣ ಸೊಟಕನಾಳ, ಮುತ್ತಪ್ಪ ಹಳ್ಳಿ, ಆರ್.ಪಿ.ಅಳವಂಡಿ, ದೇವಿಂದ್ರಪ್ಪ ಬಡಿಗೇರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.