ಶನಿವಾರ, ಆಗಸ್ಟ್ 13, 2022
23 °C
ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ

ರಸ್ತೆ ಅಗೆತ: ಡಿ.ಸಿ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಅವಳಿ ನಗರಗಳ ಬಹಳಷ್ಟು ಕಡೆಗಳಲ್ಲಿ ರಸ್ತೆಗಳನ್ನು ಕಾಮಗಾರಿಗಳಿಗಾಗಿ ಅಗೆಯಲಾಗಿದೆ. ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಮಹಾನಗರ ಪಾಲಿಕೆಯ ಆಯುಕ್ತರ ಸಭಾಭವನದಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು.

ಎಲ್ಲೆಂದರಲ್ಲಿ ರಸ್ತೆ ಅಗೆಯುತ್ತಿರುವುದರಿಂದ ನೀರು ಪೂರೈಕೆ, ವಿದ್ಯುತ್, ದೂರಸಂಪರ್ಕದ ಕೇಬಲ್‌ಗಳು ಕಡಿತಗೊಳ್ಳುತ್ತಿವೆ. ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವುದರಿಂದ ಜನ ತೊಂದರೆ ಅನುಭವಿಸುವಂತಾಗಿದೆ. ಸ್ಪಷ್ಟ ನಕಾಶೆಯೊಂದಿಗೆ ಅಧಿಕಾರಿಗಳು ಪರಸ್ಪರ ಸಂಪರ್ಕಿಸಿ ಕಾರ್ಯ ನಿರ್ವಹಿಸಬೇಕು. ಇದರಿಂದ ಸುಗಮವಾಗಿ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯ ಎಂದು ಸಲಹೆ ನೀಡಿದರು.

ರಸ್ತೆ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ, ನೀರು ಪೂರೈಕೆ, ಬಿಎಸ್‌ಎನ್‌ಎಲ್‌, ಭೂಗತ ವಿದ್ಯುತ್ ಕೇಬಲ್ ಅಳವಡಿಕೆ ಯೋಜನೆಗಳ ನಕಾಶೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ್‌ ಹಾಗೂ ಹೆಸ್ಕಾಂ, ಒಳಚರಂಡಿ, ಜಲಮಂಡಳಿ, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ, ಬಿಸ್‌ಎನ್‌ಎಲ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.