ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅತಿಕ್ರಮಣ; ಮನೆಗಳ ತೆರವು

Last Updated 10 ನವೆಂಬರ್ 2021, 15:32 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸರ್ಕಾರಿ ಜಾಗ ಅತಿಕ್ರಮಣಕಾರರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಮಹಾನಗರ ಪಾಲಿಕೆ ಬುಧವಾರ ನಗರದ ಹಳೇ ವಾರ್ಡ್‌ ಸಂಖ್ಯೆ 27ರ ವ್ಯಾಪ್ತಿಯ ಉಣಕಲ್‌ ಗ್ರಾಮದ ಗವಿಸಿದ್ದೇಶ್ವರ ನಗರದಲ್ಲಿ ಮನೆ ಹಾಗೂ ಶೆಡ್‌ಗಳನ್ನು ತೆರವುಗೊಳಿಸಿತು.

ಈ ಬಡಾವಣೆಯಲ್ಲಿ ಒಟ್ಟು 11 ಮನೆಗಳನ್ನು ಅಕ್ರಮವಾಗಿ ನಿರ್ಮಿಸಲಾಗಿದ್ದು, ಮೊದಲ ದಿನ ನಾಲ್ಕು ಮನೆಗಳನ್ನು ತೆರವು ಮಾಡಲಾಗಿದೆ. ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಗೆ ಸ್ಥಳೀಯರು ಆರಂಭದಲ್ಲಿ ವಿರೋಧ ವ್ಯಕ್ತಪಡಿಸಿದರು. ಆದ್ದರಿಂದ ಅಧಿಕಾರಿಗಳು ಪೊಲೀಸರ ನೆರವಿನೊಂದಿಗೆ ಕಾರ್ಯ ಆರಂಭಿಸಿದರು.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ‘ಜಾಗ ಅತಿಕ್ರಮಣದ ಬಗ್ಗೆ ಹಿಂದೆಯೇ ದೂರುಗಳು ಬಂದಿದ್ದವು. ಸಂಬಂಧಿಸಿದವರಿಗೆ ನೋಟಿಸ್‌ ಕೂಡ ನೀಡಲಾಗಿತ್ತು. ಈಗಲೂ ಸಾಕಷ್ಟು ದೂರುಗಳು ಬರುತ್ತಿದ್ದು, ಅವರಿಗೂ ನೋಟಿಸ್ ನೀಡಲಾಗುತ್ತಿದೆ. ಹಂತಹಂತವಾಗಿ ಅತಿಕ್ರಮಣ ತೆರವು ಕಾರ್ಯ ಮುಂದುವರಿಯಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT