ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ್ಪಿನಬೆಟಗೇರಿ: ರಸ್ತೆ ಕಾಮಗಾರಿಗೆ ಭೂಮಿ ಪೂಜೆ 

Published 26 ಫೆಬ್ರುವರಿ 2024, 15:37 IST
Last Updated 26 ಫೆಬ್ರುವರಿ 2024, 15:37 IST
ಅಕ್ಷರ ಗಾತ್ರ

ಉಪ್ಪಿನಬೆಟಗೇರಿ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಿಂದ ಆಸ್ಪತ್ರೆಗೆ ತೆರಳುವ ರಸ್ತೆಯು ಹದಗೆಟ್ಟಿದ್ದರಿಂದ ಸಾರ್ವಜನಿಕರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷೆ ಹಾಗೂ ಸರ್ವ ಸದಸ್ಯರು ಶಾಸಕ ವಿನಯ ಕುಲಕರ್ಣಿ ಅವರನ್ನು ಭೇಟಿಯಾಗಿ ರಸ್ತೆ ಕಾಮಗಾರಿಯ ಕುರಿತು ಮಾಹಿತಿ ನೀಡಿ ಮನವಿ ಮಾಡಿದ್ದರು.

ಇದಕ್ಕೆ ಸ್ಪಂದಿಸಿದ ಶಾಸಕರು ಆರೋಗ್ಯ ಕೇಂದ್ರಕ್ಕೆ ತೆರಳುವ ರಸ್ತೆ ನಿರ್ಮಾಣಕ್ಕೆ ₹ 7ಲಕ್ಷ  ಮತ್ತು ಶುದ್ದ ಕುಡಿಯುವ ನೀರಿನ ಘಟಕ ಅಳವಡಿಸಲು ₹2.50ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ.

ಕಾಂಗ್ರೆಸ್ ನಾಯಕಿ ಶಿವಲೀಲಾ ವಿನಯ ಕುಲಕರ್ಣಿ ಮತ್ತು ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಂಜುನಾಥ ಮಸೂತಿ ಅವರು ಶುಕ್ರವಾರ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಗ್ರಾಮ ಪಂಚಾಯ್ತಿ ಸದಸ್ಯರಾದ ಮಹಾವೀರ ಅಷ್ಟಗಿ, ಮಹೇಶ ಬೊಬ್ಬಿ, ಬಶೀರಅಹ್ಮದ ಮಾಳಗಿಮನಿ, ಅಬ್ದುಲಹದ್ ಕರಡಿಗುಡ್ಡ, ಉಮೇಶ ಕುರಗುಂದ, ಅಬ್ದುಲ್ ಲಂಗೋಟಿ, ಸಯ್ಯದಸಾಬ್ ಮದ್ನಿ, ಸಿದ್ದಪ್ಪ ನವಲಗುಂದ, ಚೇತನ ವಿಜಾಪೂರ ಹಾಗೂ ಆರೋಗ್ಯ ಕೇಂದ್ರದ ನೌಕರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT