ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ರಸ್ತೆ ಸುರಕ್ಷತಾ ಸಪ್ತಾಹ; ಬೈಕ್, ಕಾರ್ ರ‍್ಯಾಲಿ

Published 31 ಜನವರಿ 2024, 6:56 IST
Last Updated 31 ಜನವರಿ 2024, 6:56 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯ ಕೆಎಲ್ಇ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಆವರಣದಲ್ಲಿ ಬುಧವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬೈಕ್ ಮತ್ತು ಕಾರ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು.

ಧಾರವಾಡ ಉತ್ತರ ವಿಭಾಗದ ಸಾರಿಗೆ ಇಲಾಖೆಯ ಅಪರ ಆಯುಕ್ತ ಮಾರುತಿ ಸಾಂಬ್ರಾಣಿ ರ‍್ಯಾಲಿಗೆ ಚಾಲನೆ ನೀಡಿದರು. ಹೊಸೂರು ಮಾರ್ಗವಾಗಿ ವಿದ್ಯಾನಗರದ ಬಿವಿಬಿ ಕಾಲೇಜಿನವರೆಗೆ ರ‍್ಯಾಲಿ ನಡೆಯಿತು.

ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತೆ ಓಂಕಾರೇಶ್ವರಿ ಎಂ.ಪಿ., ಸಾರಿಗೆ ಇಲಾಖೆ ಅಧಿಕಾರಿ ಕೆ.‌ದಾಮೋದರ ಮತ್ತು ಭೀಮನಗೌಡ ಪಾಟೀಲ, ಕೆಎಲ್ಇ ಐಟಿ ಪ್ರಾಚಾರ್ಯ ಪ್ರೊ.‌ಶರದ ಜೋಶಿ, ರೋಟರಿ ಕ್ಲಬ್ ಹುಬ್ಬಳ್ಳಿ ಅಧ್ಯಕ್ಷ ನಾಗರಾಜ ಶೆಟ್ಟಿ, ಪ್ರಕಾಶ ಇರಕಲ್, ಶೇಖರಯ್ಯ ಮಠಪತಿ, ಗುರುಸಾಲಿಮಠ, ಶಂಕರ ಹಿರೇಮಠ ಪಾಲ್ಗೊಂಡಿದ್ದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT