ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಕಾಂಗ್ರೆಸ್ ತಟ್ಟೆಲಿ ಹೆಗ್ಗಣ ಬಿದ್ದಿದ್ರೂ, ಬಿಜೆಪಿ ತಟ್ಟೆಲಿ ನೊಣವಿದೆ ಅಂತಾರೆ'

Last Updated 12 ಸೆಪ್ಟೆಂಬರ್ 2021, 11:52 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಕಾಂಗ್ರೆಸ್ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದರೂ, ಬಿಜೆಪಿ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಆ ಪಕ್ಷದ ಮುಖಂಡರು ಹೇಳುತ್ತಾರೆ. ಚುನಾವಣೆಗೂ ಮುಂಚೆಯೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆದಿದೆ. ಅವರಲ್ಲಿ ಉದ್ಭವಿಸಿರುವ ನಾಯಕತ್ವದ ಬಿಕ್ಕಟ್ಟನ್ನು ಮೊದಲು ಸರಿಪಡಿಸಿಕೊಳ್ಳಲಿ. ಆಮೇಲೆ, ನಮ್ಮತ್ತ ಬೆರಳು ತೋರಿಸಲಿ’ ಎಂದು ಶಾಸಕ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮಲ್ಲಿ ನಾಯಕತ್ವದ ಬಿಕ್ಕಟ್ಟಿಲ್ಲ. ಸಾಮೂಹಿಕವಾಗಿಯೇ ಪಾಲಿಕೆ ಚುನಾವಣೆಯನ್ನು ಎದುರಿಸಿದ್ದೇವೆ. ಹಾಗಾಗಿಯೇ ಬೆಳಗಾವಿಯಲ್ಲಿ ಪಕ್ಷವು ನಿಚ್ಚಳ ಬಹುಮತ ಪಡೆದಿದೆ. ಹುಬ್ಬಳ್ಳಿ–ಧಾರವಾಡದಲ್ಲಿ ಹೆಚ್ಚು ಸ್ಥಾನ ಪಡೆದಿದ್ದು, ಸತತ ಮೂರನೇ ಬಾರಿ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಲಬುರ್ಗಿಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ’ ಎಂದು ಹೇಳಿದರು.

ಜೆಡಿಎಸ್ ಜೊತೆ ಮಾತುಕತೆ:

‘ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವ ಸಲುವಾಗಿ, ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ಸಚಿವ ಆರ್. ಅಶೋಕ ಅವರು ಮಾತುಕತೆ ನಡೆಸಿದ್ದಾರೆ. ಅಂತಿಮವಾಗಿ ಅಲ್ಲೂ ನಾವೇ ಅಧಿಕಾರಕ್ಕೆ ಬರಲಿದ್ದೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT