ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ | ಜಾನುವಾರು ಸಂಬಂಧ ಹಿಂದೂ–ಮುಸ್ಲಿಂ ಯುವಕರ ಗಲಾಟೆ: ಮೂವರಿಗೆ ಗಾಯ

Published 14 ಜೂನ್ 2024, 18:10 IST
Last Updated 14 ಜೂನ್ 2024, 18:10 IST
ಅಕ್ಷರ ಗಾತ್ರ

ಧಾರವಾಡ: ನಗರದ ಹಳೇ ಎಪಿಎಂಸಿ ಆವರಣದಲ್ಲಿ ಜಾನುವಾರು ವಿಚಾರದಲ್ಲಿ ಹಿಂದೂ ಮತ್ತು ಮುಸ್ಲಿಂ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಮೂವರಿಗೆ ಪೆಟ್ಟಾಗಿದೆ.

ಸೋಮಶೇಖರ ಚನ್ನಶೆಟ್ಟಿ, ಗಣೇಶ ಮತ್ತು ಅಮಿತ ಎಂಬವರಿಗೆ ಪೆಟ್ಟಾಗಿದೆ. ಚಿಕಿತ್ಸೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆ ನಡೆಸಿರುವ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಧಾರವಾಡ ಉಪ ನಗರ ಪೊಲೀಸ್ ಠಾಣೆ ಎದುರು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದರು.

'ಧಾರವಾಡ ಹಳೇ ಎಪಿಎಂಸಿಯಲ್ಲಿ ಅಕ್ರಮವಾಗಿ ಕಟ್ಟಿದ್ದ ಹಸುಗಳನ್ನು ರಕ್ಷಣೆ ಮಾಡಲು ಹೋಗಿದ್ದ ಸೋಮಶೇಖರ್ ಚನ್ನಶೆಟ್ಟಿ, ಇತರರ ಮೇಲೆ ಹಲ್ಲೆ ಮಾಡಿದವರನ್ನು ಶೀಘ್ರವಾಗಿ ಬಂಧಿಸಬೇಕು. ತನಿಖೆ ನಡೆಸಿ ಕ್ರಮ ಜರಿಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.‌

'ರಾಜ್ಯದಲ್ಲಿ ಗೋವು ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದರೂ ಗೋವು ಹತ್ಯೆ ಮಾಡಲು ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ. ಪೊಲೀಸರು ಕ್ರಮ ಕೈಗೊಂಡಿಲ್ಲ' ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಧಾವಿಸಿದ ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು.

ಶಾಸಕ ಅರವಿಂದ ಬೆಲ್ಲದ ಅವರು, ಸೋಮಶೇಖರ ಚೆನ್ನಶಟ್ಡಿ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಎಫ್ಐಆರ್ ದಾಖಲಿಸಿಕೊಂಡು ಶೀಘ್ರವಾಗಿ ಬಂಧಿಸಬೇಕು. ಕ್ರಮ ವಹಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರಿಗೆ ತಿಳಿಸಿದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು.

ಮಾಜಿ ಶಾಸಕರು ಅಮೃತ ದೇಸಾಯಿ, ಹಿಂದೂ ಕಾರ್ಯಕರ್ತ ಶಿವಾನಂದ ಸತ್ತಿಗೆರಿ, ಸಂಜಯ ಕಪಟಕರ, ಶಿವು ಹೀರೆಮಠ, ವಿಜಯಾನಂದ ಶಟ್ಟಿ, ಮೋಹನ ರಾಮದುರ್ಗ, ಸುರೇಶ ಬೆದರೆ, ಪ್ರಮೋದ ಕಾರಕುನ, ಜೋತಿ ಪಾಟೀಲ, ಗೀತಾ ಪಾಟಿಲ, ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT