‘ಕಾಂಗ್ರೆಸ್‌ ಸೋಲಿಸಲು ಬಿಜೆಪಿಗೆ ಬೆಂಬಲ’

ಶನಿವಾರ, ಮೇ 25, 2019
22 °C

‘ಕಾಂಗ್ರೆಸ್‌ ಸೋಲಿಸಲು ಬಿಜೆಪಿಗೆ ಬೆಂಬಲ’

Published:
Updated:

ಹುಬ್ಬಳ್ಳಿ: ದಲಿತರ ವೋಟುಗಳು ಕಾಂಗ್ರೆಸ್‌ಗೆ ಹೋಗದಂತೆ ತಡೆಯುವುದು ಹಾಗೂ ಬಿಜೆಪಿಯನ್ನು ಗೆಲ್ಲಿಸುವುದೇ ಪಕ್ಷದ ಮುಖ್ಯ ಉದ್ದೇಶವಾಗಿದೆ ಎಂದು ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾದ ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಯಲ್ಲಿ ತೀವ್ರತರವಾದ ಗೊಂದಲ ಇದ್ದು, ಅದರ ಲಾಭ ಬಿಜೆಪಿಗೆ ದಕ್ಕಲಿದೆ. 20 ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ರಾಜ್ಯದ 24 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದೇವೆ. ಇನ್ನುಳಿದ ನಾಲ್ಕು ಕ್ಷೇತ್ರಗಳಲ್ಲಿ ದಲಿತರ ವೋಟುಗಳು ಕಾಂಗ್ರೆಸ್‌ಗೆ ಹೋಗದಂತೆ ತಡೆಯುವ ಉದ್ದೇಶದಿಂದ ಮತ್ತು ಬಿಜೆಪಿ ಗೆಲುವಿಗೆ ಸಹಾಯಕವಾಗಲಿ ಎಂಬ ಕಾರಣಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದಾಗಿ ಹೇಳಿದರು.

ರಾಜ್ಯ ಸರ್ಕಾರವು ದಲಿತ ವಿರೋಧಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಎಸ್‌ಸಿ, ಎಸ್‌ಟಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುವುದು ಅತ್ಯವಶ್ಯಕವಾಗಿದೆ. ದೇಶದ ಭದ್ರತೆ ಮತ್ತು ಸರ್ವತೋಮುಖ ಅಭಿವೃದ್ಧಿಯು ಎನ್‌ಡಿಎ ಆದ್ಯತೆಯಾಗಿದೆ ಎಂದರು.

ಪಕ್ಷದ ಮುಖಂಡರಾದ ಆನಂದ, ಸತೀಶ, ಶ್ರೀನಿವಾಸ ಮೇಮು, ಸತೀಶ, ಅಂಬರೀಷ, ಗಾಳೆಮ್ಮನವರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !