ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಕೊಪ್ಪ: ₹2 ಕೋಟಿ ನಗದು ವಶ

Published 16 ಏಪ್ರಿಲ್ 2024, 15:45 IST
Last Updated 16 ಏಪ್ರಿಲ್ 2024, 15:45 IST
ಅಕ್ಷರ ಗಾತ್ರ

ಕುಂದಗೋಳ (ಧಾರವಾಡ ಜಿಲ್ಲೆ): ತಾಲ್ಲೂಕಿನ ರಾಮನಕೊಪ್ಪ ಗ್ರಾಮದ ಮನೆಯೊಂದರಲ್ಲಿ ಆದಾಯ ತೆರಿಗೆ ಅಧಿಕಾರಿಗಳು, ವಿಚಕ್ಷಣ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ದಾಖಲೆ ಇಲ್ಲದ ₹2ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.

ತಾಲ್ಲೂಕಿನ ರಾಮನಕೊಪ್ಪದ ಚೆಕ್‌ಪೋಸ್ಟ್‌ನಲ್ಲಿ ನಿಲ್ಲಿಸದೆ ಸಾಗಿದ ಕಾರೊಂದನ್ನು ಅಧಿಕಾರಿಗಳು, ಸಿಬ್ಬಂದಿ ಹಿಂಬಾಲಿಸಿದ್ದಾರೆ. ವ್ಯಕ್ತಿಯೊಬ್ಬ ಬ್ಯಾಗುಗಳೊಂದಿಗೆ ಹೋದ ಮನೆ ಮೇಲೆ ದಾಳಿ ಮಾಡಿ ನಗದು ವಶಪಡಿಸಿಕೊಂಡಿದ್ದಾರೆ.

ಭೂಮಿ ಖರೀದಿ ವಿಚಾರವಾಗಿ ಒಬ್ಬರಿಗೆ ಹಣ ನೀಡಲು ಬಂದಿದ್ದಾಗಿ ವ್ಯಕ್ತಿ ತಿಳಿಸಿದ್ದಾರೆ. ಆದರೆ ಅದಕ್ಕೆ ಪೂರಕ ದಾಖಲೆಗಳನ್ನು ನೀಡಿಲ್ಲ ಎಂದು ತಿಳಿದುಬಂದಿದೆ.

ಜಿಲ್ಲಾ ಪೊಲಿಸ್ ವರಿಷ್ಠಾದಿಕಾರಿ ಗೋಪಾಲ ಬ್ಯಾಕೋಡ, ನಾರಾಯಣ ಭರಮನಿ, ಶಿವಾನಂದ ಕಟಗಿ, ಇನ್‌ಸ್ಪೆಕ್ಟರ್‌ ಮರುಗೇಶ್ ಚೆನ್ನಣ್ಣವರ, ಶಿವಾನಂದ ಅಂಬಿಗೇರ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT