ಶುಕ್ರವಾರ, ಅಕ್ಟೋಬರ್ 23, 2020
24 °C

ಸರ್ಕಸ್ ಮಾಡಿ ಸರ್ಕಾರ ನಡೆಸುತ್ತಿದ್ದೇವೆ: ಜಗದೀಶ ಶೆಟ್ಟರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಸರ್ಕಸ್ ಮಾಡಿ ರಾಜ್ಯ ಸರ್ಕಾರ ನಡೆಸುತ್ತಿದ್ದೇವೆ. ಬೇರೆ ಪಕ್ಷಗಳಿಂದ ಬಂದವರು, ಬಿಜೆಪಿಯೊಳಗಿನ ಹಿರಿಯರು ಸೇರಿದಂತೆ ಹಲವರು ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ’ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಪುಟ ವಿಸ್ತರಣೆ ವಿಷಯವನ್ನು ಮುಖ್ಯಮಂತ್ರಿ ವಿವೇಚನೆಗೆ ಬಿಡಲಾಗಿದೆ. ಅವರು ದೆಹಲಿಗೆ ತೆರಳಿ ವರಿಷ್ಠರ ಜೊತೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಕುರಿತು, ಯಾರೂ ನನ್ನ ಅಭಿಪ್ರಾಯ ಕೇಳಿಲ್ಲ. ನಾನು ಕೂಡ ಏನನ್ನು ಹೇಳುವ ಪರಿಸ್ಥಿತಿಯಲ್ಲಿಲ್ಲ’ ಎಂದರು.

‘ಶಾಲೆ ತೆರೆಯಲು ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡವಿದೆ. ಆದರೆ, ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ, ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಲ್ಲಿ ಇನ್ನೂ ಆತಂಕವಿದೆ. ಹಾಗಾಗಿ, ಏಕಾಏಕಿ ಶಾಲೆಗಳನ್ನು ಆರಂಭಿಸುವುದು ಬೇಡ. ಬದಲಿಗೆ, ಪ್ರಾಯೋಗಿಕವಾಗಿ ಕೆಲ ಶಾಲೆಗಳನ್ನು ಆರಂಭಿಸಲಿ’ ಎಂದು ಸಲಹೆ ನೀಡಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು