ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ

Last Updated 26 ನವೆಂಬರ್ 2020, 15:20 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನೌಕರರ ಹಾಗೂ ನಿವೃತ್ತ ನೌಕರರ ತುಟ್ಟಿಭತ್ಯೆ ತಡೆ ಆದೇಶ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಹುಬ್ಬಳ್ಳಿ ವಿಭಾಗದ ಸದಸ್ಯರು ಹುಬ್ಬಳ್ಳಿ ಅಂಚೆ ಕಚೇರಿ ಎದುರು ಪ್ರತಿಭಟನೆ ಮಾಡಿದರು.

ಎನ್‌ಪಿಎಸ್‌ ಎಂಬ ನೌಕರರ ಮರಣ ಶಾಸನವನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. ಪ್ರತಿ 10 ವರ್ಷಗಳಿಗೊಮ್ಮೆ ಕೇಂದ್ರ ನೌಕರರ ವೇತನ ಪರಿಷ್ಕರಣೆ ಮಾಡುತ್ತಿದ್ದು, 5 ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಮಾಡಬೇಕು. ವೇತನ ಆಯೋಗದ ಶಿಫಾರಸುಗಳ ಜಾರಿಗೆ ವಿಳಂಬ ಮಾಡುವುದರಿಂದ ನೌಕರರಿಗೆ ನಷ್ಟವಾಗುತ್ತಿದೆ. ಆದ್ದರಿಂದ ಕೂಡಲೇ 8ನೇ ವೇತನ ಆಯೋಗ ರಚನೆ ಮಾಡಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಗೆ ಹೊಸ, ಹೊಸ ಸೇವೆಗಳನ್ನು ನೀಡಲಾಗುತ್ತಿದೆ. ಆದರೆ, ಕಾರ್ಯಕ್ಕೆ ತಕ್ಕಂತೆ ಸರ್ಕಾರ ಹುದ್ದೆಗಳ ಭರ್ತಿ ಮಾಡುತ್ತಿಲ್ಲ. ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಬೇಕು ಎನ್ನುವುದು ಸೇರಿದಂತೆ 12 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT