ಮಂಗಳವಾರ, ಜನವರಿ 18, 2022
26 °C

ಸುರಕ್ಷತಾ ನಿಯಮ; ತಾರತಮ್ಯಕ್ಕೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಅಗ್ನಿ ಸುರಕ್ಷತಾ ಕ್ರಮಗಳ ಅಳವಡಿಕೆಯ ನಿಮಯಗಳನ್ನು ಖಾಸಗಿ ಶಾಲೆಗಳಿಗೆ ಕಡ್ಡಾಯ ಮಾಡಿ, ಸರ್ಕಾರಿ ಶಾಲೆಗಳಿಗೆ ವಿನಾಯಿತಿ ನೀಡಲಾಗಿದೆ. ಈ ತಾರತಮ್ಯ ನಿಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಆಗ್ರಹಿಸಿದೆ.

ಈ ನಿಯಮಗಳನ್ನು ಸರಳೀಕರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದ್ದರೂ, ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ, ಕಟ್ಟಡ ಸುರಕ್ಷತಾ ನಿಯಮಕ್ಕೆ ಸಂಬಂಧಿಸಿದಂತೆ ಯಾವುದೇ ಶುಲ್ಕವನ್ನು ಕಟ್ಟದೆ ಇರಲು ನಿರ್ಧರಿಸಲಾಗಿದೆ. ದ್ವಂದ್ವ ನಿಯಮ ಖಂಡಿಸಿ ರಾಜ್ಯದಾದ್ಯಂತ ಶಾಲಾ– ಕಾಲೇಜುಗಳಿಂದ ಪತ್ರ ಚಳವಳಿ ಮತ್ತು ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಮುಂಬರುವ ದಿನಗಳಲ್ಲಿ ಒಂದು ದಿನ ಸಾಂಕೇತಿಕ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಜಿ.ಆರ್‌. ಭಟ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.