ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಬಡವರಿಗೆ ಆಶ್ರಯ ಮನೆ ನೀಡಿ

Last Updated 17 ಫೆಬ್ರುವರಿ 2023, 6:45 IST
ಅಕ್ಷರ ಗಾತ್ರ

ಧಾರವಾಡ: ಹಿಂದುಳಿದ ವರ್ಗದವರು, ಆರ್ಥಿಕವಾಗಿ ಹಿಂದುಳಿದವರು ಮತ್ತು ಸೂರಿಲ್ಲದ ಬಡವರಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಡವರ ಹಿತರಕ್ಷಣಾ ವೇದಿಕೆ ಸದಸ್ಯರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

‘ನಗರದ 1ರಿಂದ 24ರವರೆಗೆ ವಾರ್ಡ್‌ಗಳಲ್ಲಿ ಹೆಚ್ಚಾಗಿ ಬಡವರು ವಾಸವಿದ್ದಾರೆ. ಬೆಲೆ ಏರಿಕೆಯಿಂದ ಬಾಡಿಗೆ ಕಟ್ಟಲು ಸಹ ಒದ್ದಾಡುತ್ತಿದ್ದಾರೆ. ಕೆಲ ಪ್ರದೇಶದಲ್ಲಿ ಆಶ್ರಯ ಮನೆಗಳ ಹಂಚಿಕೆ ಕಾರ್ಯ ನಡೆದಿದೆ. ರಾಜಕೀಯ ಒತ್ತಡದಿಂದ ಅರ್ಹ ಫಲಾನುಭವಿಗಳಿಗೆ ಮನೆ ನೀಡುತ್ತಿಲ್ಲ. ಅರ್ಹ ಫಲಾನುಭವಿಗಳ ಪಟ್ಟಿ ಕೈಬಿಟ್ಟು ಅನರ್ಹರಿಗೆ ಮನೆಗಳ ಹಂಚಿಕೆ ಮಾಡುತ್ತಿದ್ದಾರೆ. ಫಲಾನುಭವಿಗಳ ಪಟ್ಟಿಯನ್ನು ಮತ್ತೊಮ್ಮೆ ಪರಿಶೀಲಿಸಿ, ಪಾರದರ್ಶಕವಾಗಿ ಮನೆಗಳ ಹಂಚಿಕೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದು ಅನಿವಾರ್ಯ’ ಎಂದು ಎಚ್ಚರಿಸಿದರು.

‘ಆಶ್ರಯ ಮನೆ ಹಂಚಿಕೆಯಲ್ಲಿ ತಾರತಮ್ಯ ಎಸಗಿದ ಪ್ರಾಧಿಕಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದೆ. ಆದರೆ, ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೆ ಪರಿಶೀಲನೆ ನಡೆಸಿ, ಬಡವರಿಗೆ ನ್ಯಾಯ ದೊರಕಿಸಿ ಕೊಡಬೇಕು’ ಎಂದು ಒತ್ತಾಯಿಸಿದರು.

ಹೇಮಂತ ನಾಡಗೇರ, ಬಸಪ್ಪ ಬೆಟಗೇರಿ, ಸಿದ್ದಪ್ಪ ಕಡಕೋಳ, ಇಬ್ರಾಹಿಂಸಾಬ ಪೀರಜಾದೆ, ನಾಗಪ್ಪ ದಾಡಿಬಾವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT