ಸೋಮವಾರ, ಡಿಸೆಂಬರ್ 5, 2022
19 °C

ಗಂಧದ ಮರಕ್ಕೆ ಕಳ್ಳರಿಂದ ಕೊಡಲಿ ಪೆಟ್ಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಪ್ಪಿನಬೆಟಗೇರಿ: ಗ್ರಾಮದ ಮಾರ್ಕೇಟ್‌ ರಸ್ತೆಯ ಕರಬಸಪ್ಪ ಓಂಕಾರಿ ಎಂಬುವವರ ಮನೆಯ ಹಿತ್ತಲಲ್ಲಿ ಬೆಳೆದಿದ್ದ ಶ್ರೀಗಂಧದ ಗಿಡವನ್ನು ಕತ್ತರಿಸಿದ ಕಳ್ಳರು, ಅದನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.

ಸೋಮವಾರ ಬೆಳಗಿನ ಜಾವ ಈ ಕಳವು ನಡೆದಿದೆ. ಗಿಡವನ್ನು ಯಾಂತ್ರಿಕ ಗರಗಸದಿಂದ ಕತ್ತರಿಸಿ, ತುಂಡರಿಸಿಕೊಂಡು ಹೋಗಿದ್ದಾರೆ. ಬೈಕ್‌ ಮೇಲೆ ಬಂದಿದ್ದ ಇಬ್ಬರು ಮರವನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ.

ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು