ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.‌ ವೀರಣ್ಣ, ಡಾ.‌ ಜಯಶ್ರೀ ದಂಪತಿಗೆ 'ಸಂಗಮ ಸಿರಿ' ಪ್ರಶಸ್ತಿ

ಹುಬ್ಬಳ್ಳಿಯ ಕೆಸಿಸಿಐ ಸಭಾಂಗಣದಲ್ಲಿ ಅ. 2ಕ್ಕೆ ಪ್ರಶಸ್ತಿ ಪ್ರದಾನ
Last Updated 21 ಸೆಪ್ಟೆಂಬರ್ 2022, 6:42 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣಾರ್ಥವಾಗಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ನೀಡುವ 'ಸಂಗಮ ಸಿರಿ' ಪ್ರಶಸ್ತಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು ಹಾಗೂ ಸಾಹಿತಿಗಳಾದ ಡಾ. ವೀರಣ್ಣ ದಂಡೆ ಹಾಗೂ ಡಾ. ಜಯಶ್ರೀ ದಂಡೆ ದಂಪತಿಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಜಿ.ಜಿ. ಗೌಡಪ್ಪಗೊಳ ಹೇಳಿದರು.

ವಚನ ಸಾಹಿತ್ಯದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ‌ ಗೌರವಿಸುವ ಕೆಲಸವನ್ನು ಪ್ರತಿಷ್ಠಾನ ಮಾಡುತ್ತಿದ್ದು, ಮೊದಲ ಬಾರಿಗೆ 'ಸಂಗಮ ಸಿರಿ' ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ₹10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಅ. 2ರಂದು ಹುಬ್ಬಳ್ಳಿಯ ಜೆ.ಸಿ.‌ ನಗರದಲ್ಲಿರುವ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಸಂಜೆ 5ಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಶಸ್ತಿ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಸಾಹಿತಿ ಮಹಾಂತಪ್ಪ ನಂದೂರು ಕಾರ್ಯ ನಿರ್ವಹಿಸಿದರು. ಸಮಿತಿಯಲ್ಲಿ ಸಾಹಿತಿ ಎಸ್.ವಿ. ಪಟ್ಟಣಶೆಟ್ಟಿ, ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ, ಜಾನಪದ ತಜ್ಞ ಡಾ. ರಾಮು ಮೂಲಗಿ, ಡಾ. ಮಹೇಶ ಹೊರಕೇರಿ, ಜಿ.ವಿ. ಹಿರೇಮಠ, ರವೀಂದ್ರ ರಾಮದುರ್ಗಕರ ಹಾಗೂ ಬಸವರಾಜ ಕರ್ಕಿ ಇದ್ದರು ಎಂದರು.

ಸಾಹಿತಿ ಮಹಾಂತಪ್ಪ ನಂದೂರ ಮಾತನಾಡಿ, ಸಂಗಮೇಶ ಹಂಡಿಗಿ ಅವರು 46 ಕೃತಿಗಳನ್ನು ರಚಿಸಿದ್ದು, ಸಾಹಿತ್ಯ ಲೋಕದಲ್ಲಿ ತಮ್ಮದೇ ಬಳಗವನ್ನು ಸೃಷ್ಟಿಸಿಕೊಂಡಿದ್ದರು. ಅವರ ನೆನಪಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಡಾ. ಸಂಗಮೇಶ ಹಂಡಿಗಿ ಹಾಗೂ ಬೀದರ್ ನ ಹಂಶಕವಿ ಅವರು ಸಂಪಾದಿಸಿದ 'ಆಧುನಿಕ ವಚನಗಳು ಭಾಗ -10' ಕೃತಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ. ವೀರೇಶ ಹಂಡಿಗಿ ಹಾಗೂ ಖಜಾಂಚಿ ಬಸವರಾಜ ಕರ್ಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT