ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಸಂಗೊಳ್ಳಿ ರಾಯಣ್ಣ’ ಪ್ರಶಸ್ತಿ ಪ್ರದಾನ 12ರಂದು

Published : 5 ಸೆಪ್ಟೆಂಬರ್ 2024, 14:09 IST
Last Updated : 5 ಸೆಪ್ಟೆಂಬರ್ 2024, 14:09 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ‘ಇಲ್ಲಿನ ಜಯಚಾಮರಾಜ ನಗರದ ಅಕ್ಕನ ಬಳಗ ಸಭಾಂಗಣದಲ್ಲಿ ಸೆ.12ರಂದು ಗಜಾನನ ಮಹಾಮಂಡಳದ ವತಿಯಿಂದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ‘ವೀರ ಸಂಗೊಳ್ಳಿ ರಾಯಣ್ಣ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಹಾಮಂಡಳದ ಅಧ್ಯಕ್ಷ ಡಿ.ಗೋವಿಂದರಾವ್ ತಿಳಿಸಿದರು. 

‘ಕಳೆದ 32 ವರ್ಷಗಳಿಂದ ಗಜಾನನ ಮಹಾಮಂಡಳವು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿದೆ. ಜೊತೆಗೆ ಪ್ರತಿವರ್ಷ 50 ಸಾರ್ವಜನಿಕ ಗಣೇಶ ಮೂರ್ತಿ, ಸಮಿತಿಗಳಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ಬಾರಿಯೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

‘ಸಾರ್ವಜನಿಕವಾಗಿ ಪ್ರತಿಷ್ಠಾಪಿಸುವ ಗಣೇಶಮೂರ್ತಿಯ ಬೃಹತ್‌ ಮಂಟಪಗಳಿಗೆ ತಂಬಾಕು ಉತ್ಪನ್ನ ಮಾರಾಟ, ಸೇವನೆಗೆ ಸಂಬಂಧಿಸಿದ ಯಾವುದೇ ಜಾಹೀರಾತು ಫಲಕ, ಬ್ಯಾನರ್‌ಗಳನ್ನು ಅಳವಡಿಸಬಾರದು’ ಎಂದು ಮನವಿ ಮಾಡಿದರು. 

ಗಂಗಾಧರ ದೊಡ್ಡವಾಡ, ಸಿದ್ದರಾಜು, ಅನುಪಮ ಹಂಸಬಾವಿ, ವಸಂತ ಡಂಗನವರ, ಶಶಿಕಲಾ ನಾಯ್ಡು ಪತ್ರಿಕಾಗೋಷ್ಠಿಯಲ್ಲಿ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT