ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ | ಸಂತ ಸೇವಾಲಾಲ್ ಜಯಂತ್ಯುತ್ಸವ 15ರಂದು

Published 13 ಫೆಬ್ರುವರಿ 2024, 14:22 IST
Last Updated 13 ಫೆಬ್ರುವರಿ 2024, 14:22 IST
ಅಕ್ಷರ ಗಾತ್ರ

ಧಾರವಾಡ: ‘ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಫೆ.15ರಂದು ಸಂತ ಸೇವಾಲಾಲ್ ಜಯಂತಿ ಆಯೋಜಿಸಲಾಗಿದೆ’ ಎಂದು ಜಾನಪದ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ. ಡಿ.ಬಿ.ನಾಯಕ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹುಬ್ಬಳ್ಳಿಯ ಸೇವಾಲಾಲ್ ಬಂಜಾರ ಗುರುಪೀಠದ ತಿಪ್ಪೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಸೇವಾಲಾಲ್ ಅವರು ಬಂಜಾರ ಸಮಾಜವನ್ನು ಸಂಘಟಿಸಿ ಸಾಮಾಜಿಕ, ಆರ್ಥಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಸ್ವರೂಪ ಗಟ್ಟಿಗೊಳ್ಳುವಂತೆ ಮಾಡಿದರು. ಅಹಿಂಸೆ, ದಯೆ, ಮಹಿಳಾ ಸಮಾನತೆ ಬೋಧಿಸಿದರು ಎಂದು ತಿಳಿಸಿದರು.

ಹರಿಲಾಲ ಪವಾರ, ಕೃಷ್ಣ ಚವ್ಹಾಣ, ನಾಗರಾಜ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT