ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಎಸ್‌ಬಿಐ: ಗ್ರಾಹಕರಿಗೆ ಗುಣಮಟ್ಟದ ಸೇವೆ’

Published 3 ಜುಲೈ 2024, 15:40 IST
Last Updated 3 ಜುಲೈ 2024, 15:40 IST
ಅಕ್ಷರ ಗಾತ್ರ

ಅಳ್ನಾವರ: ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಉದ್ದೇಶ ಹೊತ್ತು ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕಿನ ಸೇವೆ ಶ್ಲಾಘನೀಯ ಎಂದು ಹುಬ್ಬಳ್ಳಿ ವಾಣಿಜ್ಯೋದ್ಯಮ
ಸಂಸ್ಥೆಯ ಮಾಜಿ ಅಧ್ಯಕ್ಷ ಎಂ.ಸಿ. ಹಿರೇಮಠ ಹೇಳಿದರು.

ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಮಂಗಳವಾರ ನಡೆದ ಸ್ಟೇಟ್ ಬ್ಯಾಂಕ್ಸ್ ದಿನಾಚರಣೆ ಹಾಗೂ ನೂತನ ತಂತ್ರಜ್ಞಾನದ ಎಟಿಎಂ ಸೇವೆ ಉದ್ಘಾಟಿಸಿ ಅವರು ಮಾತನಾಡಿದರು.

‘ಸದಾ ನಮ್ಮ ಏಳಿಗೆ ಬಯಸುವ ಸ್ನೇಹಿತನಂತೆ ಗ್ರಾಹಕರು ಬ್ಯಾಂಕಿನ ಜೊತೆಗೆ ಒಳ್ಳೆಯ ಸಂಬಂಧವನ್ನು ಇಟ್ಟುಕೊಂಡಾಗ ಮಾತ್ರ ನಮ್ಮ ಏಳಿಗೆಯ ಜೊತೆಗೆ ಬ್ಯಾಂಕಿನ ಅಭಿವೃದ್ಧಿ ಸಾಧ್ಯ. ಗ್ರಾಹಕರು ಸುಧಾರಿತ
ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು’ ಎಂದರು.

ಶಾಖಾ ಕಚೇರಿಯ ವ್ಯವಸ್ಥಾಪಕ ಅಭಿಷೇಕ ಅಡಿಗ, ‘ದೇಶದ ಉದ್ದಗಲಕ್ಕೂ ಎಸ್‌ಬಿಐ ತನ್ನ ಶಾಖೆಗಳನ್ನು ತೆರೆದು ಗ್ರಾಹಕರಿಗೆ ಸೇವೆ ನೀಡುತ್ತಿದೆ. ಅದರ ಜೊತೆಗೆ ನೂತನ ತಂತ್ರಜ್ಞಾನ ಮತ್ತು ಯಂತ್ರಗಳನ್ನು ಅಳವಡಿಸುವ ಮೂಲಕ ಗ್ರಾಹಕರಿಗೆ ಸಕಾಲದಲ್ಲಿ ಸೇವೆಗಳನ್ನು ನೀಡುತ್ತಿದೆ’ ಎಂದರು.

ಆನಂದ ಬಿಜಾಪೂರ, ಬಸವರಾಜ ಬಾಗೇವಾಡಿ, ಮಂಜುನಾಥ ರಾವಲ, ವಿನಯಾ ಮಯಾ, ಯಮುನಾ ಆನಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT