ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ | ಶಾಲಾ ಪ್ರಾರಂಭೋತ್ಸವ: ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಪಾಠ

Published 31 ಮೇ 2024, 6:34 IST
Last Updated 31 ಮೇ 2024, 6:34 IST
ಅಕ್ಷರ ಗಾತ್ರ

ಧಾರವಾಡ: ನಗರದ ಸರ್ಕಾರಿ ಪ್ರಾಯೋಗಿಕ ಉರ್ದು ಮತ್ತು ಕನ್ನಡ ಶಾಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಇಂಗ್ಲಿಷ್ ವಿಷಯ ಬೋಧನೆ ಮಾಡಿದರು.

ಶಾಲಾ ಪ್ರಾರಂಭೋತ್ಸವದಲ್ಲಿ ಅವರು ಬೋಧನೆ ಮಾಡಿದರು. ಇಂಗ್ಲಿಷ್ ನಲ್ಲಿ ಮಾತನಾಡಲು ಭಯಪಡಬಾರದು. ದಿನಪತ್ರಿಕೆಗಳು, ಪುಸ್ತಕಗಳನ್ನು ಓದಬೇಕು. ಆತ್ಮವಿಶ್ವಾಸ ಇದ್ದರೆ ಯಾವುದೇ ಭಾಷೆ ಕಲಿಯಬಹುದು ಎಂದರು.

ಶಾಲೆಯಲ್ಲಿ ಸ್ನೇಹಿತರೊಂದಿಗೆ ಇಂಗ್ಲಿಷ್‌ನಲ್ಲಿ ಮಾತನಾಡಬೇಕು. ತಪ್ಪು ಮಾತನಾಡಿದರೆ ತೊಂದರೆ ಇಲ್ಲ. ತಪ್ಪನ್ನು ಸರಿಪಡಿಸಿಕೊಳ್ಳಬೇಕು. ಹೀಗೆ ಮಾಡುವುದರಿಂದ ಇಂಗ್ಲಿಷ್ ನಲ್ಲಿ ಮಾತನಾಡುವುದನ್ನು ರೂಢಿಸಿಕೊಳ್ಳಬಹುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT