ಹುಬ್ಬಳ್ಳಿ: ‘ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ಪೂರೈಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಮತ್ತು ಸಂಬಂಧಪಟ್ಟ ಇಲಾಖೆ ಸಚಿವರ ಮನವೊಲಿಸಲಾಗುವುದು’ ಎಂದು ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಹೇಳಿದರು.

‘ಸಿಬ್ಬಂದಿ ಮತ್ತು ಆರ್ಥಿಕ ಸಂಪನ್ಮೂಲ ಕೊರತೆಯಿಂದ ಸಮವಸ್ತ್ರ ಪೂರೈಸಲು ಆಗುತ್ತಿಲ್ಲ. ರಾಜ್ಯದ ಎಲ್ಲ ಶಾಲೆಗಳಿಗೆ ನಿಗಮದಿಂದ ಸಮವಸ್ತ್ರ ಪೂರೈಸಿದರೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ’ ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

‘ಸರ್ಕಾರವು ನಿಗಮಕ್ಕೆ ಪ್ರಸಕ್ತ ವರ್ಷ ₹10 ಕೋಟಿ ಅನುದಾನ ನೀಡಿದೆ. ಅಭಿವೃದ್ಧಿ ಕುಂಠಿತವಾಗಲು ಅನುದಾನ ಕೊರತೆಯೂ ಕಾರಣ. ಹೀಗಾಗಿ ₹30 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಹೇಳಿದರು.

‘ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಮತ್ತು ಜವಳಿ ಸಂಪನ್ಮೂಲ ಅಭಿವೃದ್ಧಿ ನಿಗಮದ ವಿಲೀನ ಪ್ರಕ್ರಿಯೆ ನಡೆದಿದೆ. ಅಧಿಕಾರಿಗಳು ಈ ಬಗ್ಗೆ ವರದಿ ಸಿದ್ಧಪಡಿಸುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.