ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಪರವಾನಗಿ ಇಲ್ಲದೆ ಮದ್ಯ ಮಾರಾಟ, ಪ್ರತಿಭಟನೆ

Last Updated 7 ಏಪ್ರಿಲ್ 2022, 4:48 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅವಳಿ ನಗರಗಳ ಖಾನಾವಳಿ, ಡಾಬಾಗಳಲ್ಲಿ ಮತ್ತು ಕೆಲವು ಮನೆಗಳಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಇದನ್ನು ತಡೆಯಬೇಕು ಎಂದು ಆಗ್ರಹಿಸಿ ಸಮಗ್ರ ಕರ್ನಾಟಕ ರಕ್ಷಣಾಸೇನೆ ರಾಜ್ಯ ಘಟಕದ ಅಧ್ಯಕ್ಷ ಕುಬೇರ ವಿ. ಪವಾರ ಹಾಗೂ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಮಹಾತ್ಮ ಗಾಂಧಿ ಭಾವಚಿತ್ರ ಹಾಗೂ ಮದ್ಯದ ಬಾಟಲ್‌ ಮುಂದಿಟ್ಟುಕೊಂಡು ಪ್ರತಿಭಟಿಸಿ ‘ಅನುಮತಿ ಇಲ್ಲದೆ ಮಾರಾಟ ಮಾಡುತ್ತಿರುವುದನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮಕೈಗೊಂಡಿಲ್ಲ. ಶೀಘ್ರದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಜನರನ್ನು ಸೇರಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಹಾಗೂ ಅಬಕಾರಿ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಸೇನೆ ಸದಸ್ಯರಾದ ಶಂಕರನಾಗ ಶಿಂಧೆ, ಕುಮಾರ ಅಳಕವಾಡಿ, ಯುವರಾಜ ಬಳ್ಳಾರಿ, ಗುರು ಪಾಟೀಲ, ಪ್ರಮೋದ ಸರವದೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT