ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಜಲೀಕರಣ: ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಆಸ್ಪತ್ರೆಗೆ ದಾಖಲು

Last Updated 20 ಮಾರ್ಚ್ 2019, 9:22 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ದೇಹದಲ್ಲಿ ನಿರ್ಜಲೀಕರಣ ಹೆಚ್ಚಾಗಿದ್ದರಿಂದ, ಇಲ್ಲಿನ ಕಿಮ್ಸ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ನಿರ್ಜಲೀಕರಣದಿಂದಾಗಿ ಮಾರ್ಚ್ 14ರಂದು ಇದ್ದಕ್ಕಿದ್ದಂತೆ ತಂದೆ ಅಸ್ವಸ್ಥರಾದರು. ವೈದ್ಯರನ್ನು ಸಂಪರ್ಕಿಸಿದಾಗ, ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದರು. ಬಳಿಕ, ಕಿಮ್ಸ್‌ಗೆ ಕರೆ ತರಲಾಯಿತು. ವೈದ್ಯರು ಎಲ್ಲಾ ಪರೀಕ್ಷೆಗಳನ್ನು ನಡೆಸಿದ್ದು, ಸದ್ಯ ಆರಾಮವಾಗಿದ್ದಾರೆ. ಸಂಜೆ ಮನೆಗೆ ಕರೆದೊಯ್ಯಲಾಗುವುದು’ ಎಂದು ಪಾಟೀಲ ಪುಟ್ಟಪ್ಪ ಅವರ ಪುತ್ರ ಅಶೋಕ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

ಮಾಡಿದ್ದು ಸಾಕು, ವಿಶ್ರಾಂತಿ ಪಡೆಯಿರಿ:ಕಟ್ಟಡ ಕುಸಿತದ ಗಾಯಾಳುಗಳ ಭೇಟಿಗಾಗಿ ಕಿಮ್ಸ್‌ಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಇದೇ ಸಂದರ್ಭದಲ್ಲಿ ಪಾಟೀಲ ಪುಟ್ಟಪ್ಪ ಅವರ ಯೋಗಕ್ಷೇಮ ವಿಚಾರಿಸಿದರು. ‘ನೂರು ವರ್ಷದಾಗೆ ನೀವು ತುಂಬಾ ಕೆಲಸ ಮಾಡಿದ್ದೀರಿ. ಈಗಲಾದರೂ, ಎಲ್ಲೂ ಓಡಾಡದೆ ಮನೆಯಲ್ಲಿ ವಿಶ್ರಾಂತಿ ಪಡೆಯಿರಿ’ ಎನ್ನುತ್ತಾ, ಕಾಲುಮುಟ್ಟಿ ನಮಸ್ಕರಿಸಿದರು.

ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ, ಶಾಸಕ ಪ್ರಸಾದ ಅಬ್ಬಯ್ಯ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್‌.ಎಚ್. ಕೋನರಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT