ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಗುಪ್ಪಿ: ಹೆದ್ದಾರಿ ಬದಿ ಅಂಗಡಿ ತೆರವು

Last Updated 13 ಡಿಸೆಂಬರ್ 2022, 7:24 IST
ಅಕ್ಷರ ಗಾತ್ರ

ಹುಬ್ಬಳ್ಳಿ: ತಾಲ್ಲೂಕಿನ ಶಿರಗುಪ್ಪಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ –63ರ ವಿಸ್ತರಣೆಗಾಗಿ, ರಸ್ತೆ ಬದಿಯ ಕೆಲ ಅಂಗಡಿಗಳನ್ನು ತಾಲ್ಲೂಕು ಆಡಳಿತವು ಸೋಮವಾರ ತೆರವುಗೊಳಿಸಿತು.ಬೆಳಿಗ್ಗೆ 6ಕ್ಕೆಜೆಸಿಬಿ ವಾಹನದೊಂದಿಗೆ ಸ್ಥಳಕ್ಕೆ ಬಂದ ಅಧಿಕಾರಿಗಳು, ಮಧ್ಯಾಹ್ನ 12ರ ತನಕ ತೆರವು ಕಾರ್ಯಾಚರಣೆ ನಡೆಸಿದರು. ಅಹಿತಕರ ಘಟನೆ ನಡೆಯದಂತೆ, ಸ್ಥಳದಲ್ಲಿ 50ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿತ್ತು. ನಗರ ಸಶಸ್ತ್ರ ಪಡೆಯ ವಾಹನ ಸಹ ಸ್ಥಳದಲ್ಲಿ ಬೀಡು ಬಿಟ್ಟಿತ್ತು.

‘ಉದ್ದೇಶಿತ ಸ್ಥಳದಲ್ಲಿ ಹೆದ್ದಾರಿ ವಿಸ್ತರಣೆ ಕಾಮಗಾರಿ ಬಾಕಿ ಉಳಿದಿತ್ತು. ಅಂಗಡಿ ಮಾಲೀಕರಿಗೆ ಈಗಾಗಲೇ ಪರಿಹಾರ ಪಾವತಿಸಿ, ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಕೆಲವರು ಇನ್ನೂ ಪರಿಹಾರ ಬೇಕೆಂದು ಹಟ ಹಿಡಿದು ಅಲ್ಲಿಯೇ ಇದ್ದರು. ರಸ್ತೆ ವಿಸ್ತರಣೆ ತುರ್ತಾಗಿ ಆಗಬೇಕಿದ್ದರಿಂದ, ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಮಾಲೀಕರ ಮನವೊಲಿಸಿಯೇ ಅಂಗಡಿಗಳನ್ನು ತೆರವುಗೊಳಿಸಲಾಯಿತು’ ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ‘ಪ್ರಜಾವಾಣಿ’ಗೆ ತಿಳಿಸಿದರು.

ಏಕಾಏಕಿ ನೆಲಸಮ: ‘ರಸ್ತೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸೂಕ್ತ ಪರಿಹಾರ ನೀಡದೆ ತಾರತಮ್ಯ ಮಾಡಿದ್ದಾರೆ. ಈ ಬಗ್ಗೆ ಪ್ರಾಧಿಕಾರ ಸೇರಿದಂತೆ, ಹಲವು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಆದರೂ, ತೆರವು ನೋಟಿಸ್ ನೀಡದೆ ಏಕಾಏಕಿ ಬಂದು ಅಂಗಡಿ ಹಾಗೂ ಮನೆಗಳನ್ನು ನೆಲಸಮ ಮಾಡಿದ್ದಾರೆ’ ಎಂದು ಗ್ರಾಮದ ಶಂಭು, ಸಿದ್ದಣ್ಣ ಹುಬ್ಬಳ್ಳಿ ಹಾಗೂ ಅಣ್ಣಪ್ಪ ಕುಲಕರ್ಣಿ ದೂರಿದರು.

ಸ್ಥಳದಲ್ಲಿ ಕಂದಾಯ ಇಲಾಖೆ, ಪೊಲೀಸರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT