ಶೂಟಿಂಗ್: ಹುಬ್ಬಳ್ಳಿ ಶೂಟರ್ಗಳಿಗೆ 18 ಪದಕ

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಶೂಟಿಂಗ್ ಕ್ರೀಡಾಕೂಟದಲ್ಲಿ ಹುಬ್ಬಳ್ಳಿ ಸ್ಪೋರ್ಟ್ಸ್ ಶೂಟಿಂಗ್ ಅಕಾಡೆಮಿಯ ಶೂಟರ್ಗಳು 9 ಚಿನ್ನ, ಮೂರು ಬೆಳ್ಳಿ ಮತ್ತು ಆರು ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.
ಯಲಹಂಕದಲ್ಲಿ ಪ್ರಕಾಶ ಪಡುಕೋಣೆ–ರಾಹುಲ್ ದ್ರಾವಿಡ್ ಕ್ರೀಡಾಂಗಣದಲ್ಲಿ ನಡೆದಿದ್ದ ಟೂರ್ನಿಯಲ್ಲಿ ಇಲ್ಲಿನ 65 ಶೂಟರ್ಗಳು ಪಾಲ್ಗೊಂಡಿದ್ದರು. ವಿನುತಾ ಲಕಮನಹಳ್ಳಿ ಅತ್ಯುತ್ತಮ ಸಾಧನೆ ತೋರಿ ವೈಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಪಡೆದರು. ಜೇಫರ್ ಅರಳಿ ಮೂರು ಚಿನ್ನ, ತಂಡ ವಿಭಾಗದಲ್ಲಿ ಮೂರು ಪ್ರಶಸ್ತಿಗಳನ್ನು ಪಡೆದಿದೆ.
ಚೆನ್ನೈನಲ್ಲಿ ನಡೆಯಲಿರುವ ದಕ್ಷಿಣ ಲವಯ ಮಟ್ಟದ ಶೂಟಿಂಗ್ ಕ್ರೀಡಾಕೂಟಕ್ಕೆ ಇಲ್ಲಿನ ಅಕಾಡೆಮಿಯ 33 ಶೂಟರ್ಗಳು ಅರ್ಹತೆ ಪಡೆದುಕೊಂಡಿದ್ದಾರೆ. ಮಕ್ಕಳ ಸಾಧನೆಗೆ ಅಕಾಡೆಮಿ ಸಂಸ್ಥಾಪಕ ಶಿವಾನಂದ ಬಾಲೆಹೊಸೂರು ಹಾಗೂ ಕೋಚ್ ರವಿಚಂದ್ರ ಬಾಲೆಹೊಸೂರು ಹರ್ಷ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.