ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ತಗುಲಿ ವಾಟರ್‌ಮನ್‌ ಸಾವು

Published 4 ಜೂನ್ 2023, 8:58 IST
Last Updated 4 ಜೂನ್ 2023, 8:58 IST
ಅಕ್ಷರ ಗಾತ್ರ

ನವಲಗುಂದ: ತಾಲ್ಲೂಕಿನ ತಡಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಹಟ್ಟಿ ಗ್ರಾಮದಲ್ಲಿ ವಿದ್ಯುತ್ ತಗುಲಿ ವಾಟರ್‌ಮನ್‌ ಮೃತಪಟ್ಟಿದ್ದಾರೆ.

ಅರಹಟ್ಟಿ ಗ್ರಾಮದ ರುದ್ರಪ್ಪ ಬಸಪ್ಪ ಬಡಿಗೇರ (38) ಮೃತಪಟ್ಟವರು. ಶುಕ್ರವಾರ ಸಂಜೆ ಗ್ರಾಮದಲ್ಲಿ ಬೀದಿ ದೀಪಗಳನ್ನು ಬೆಳಗಿಸಲು ಸ್ವಿಚ್‌ ಹಾಕುತ್ತಿದ್ದ ವೇಳೆ ವಿದ್ಯುತ್ ತಗುಲಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT