ಹುಬ್ಬಳ್ಳಿ: ವಿಶ್ವ ಹಿಂದೂ ಪರಿಷತ್, ಬಜರಂಗ ದಳದಿಂದ ಶೌರ್ಯ ಯಾತ್ರೆ

ಹುಬ್ಬಳ್ಳಿ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ನಗರದಲ್ಲಿ ಭಾನುವಾರ ಶೌರ್ಯ ಯಾತ್ರೆಯ ಮೆರವಣಿಗೆ ನಡೆಸಿದರು.
ಮೂರು ಸಾವಿರ ಮಠದ ಆವರಣದಿಂದ ಆರಂಭಗೊಂಡ ಮೆರವಣಿಗೆ ವಿಕ್ಟೋರಿಯಾ ರಸ್ತೆ, ಕೊಪ್ಪಿಕರ ರಸ್ತೆ, ಶಕ್ತಿ ರಸ್ತೆ, ಸ್ಟೇಷನ್ ರಸ್ತೆ, ಗಣೇಶಪೇಟೆ, ಮರಾಠ ಗಲ್ಲಿ ಹಾಗೂ ಶಿವಾಜಿ ಚೌಕದ ಮಾರ್ಗವಾಗಿ ದುರ್ಗದ ಬೈಲ್ ತಲುಪಿತು.
ಕೈಯಲ್ಲಿ ಭಗವಾಧ್ವಜ ಹಿಡಿದ ಕಾರ್ಯಕರ್ತರು, ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಭಾರತ ಮಾತೆಯ ಚಿತ್ರ ಹಾಗೂ ಆಂಜನೇಯ ಪ್ರತಿಮೆ ಗಮನ ಸೆಳೆಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.