ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಭ್ರಮದ ಸಿದ್ದಪ್ಪಜ್ಜನ ರಥೋತ್ಸವ

Published 4 ಫೆಬ್ರುವರಿ 2024, 4:08 IST
Last Updated 4 ಫೆಬ್ರುವರಿ 2024, 4:08 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಉಣಕಲ್‌ನ ಸದ್ಗುರು ಸಿದ್ದಪ್ಪಜ್ಜನವರ ಮೂಲ ಗದ್ದುಗೆ ಮಠದಲ್ಲಿ ಸಿದ್ದಪ್ಪಜ್ಜನವರ 103ನೇ ಪುಣ್ಯಾರಾಧನೆ ಹಾಗೂ ರಥೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು.

‘ಹರ ಹರ ಮಹಾದೇವ’  ‘ಸಿದ್ದಪ್ಪಜ್ಜ ಮಹಾರಾಜ್‌ ಕಿ ಜೈ’ ಎಂಬ ಘೋಷಣೆಗಳನ್ನು ಕೂಗುತ್ತಾ ಭಕ್ತರು ಅಜ್ಜನ ತೇರು ಎಳೆದು ಸಂಭ್ರಮಿಸಿದರು.

ಬೆಳಿಗ್ಗೆಯಿಂದಲೇ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ವಿಶೇಷ ಪೂಜೆ, ಮಂಗಳಾರತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು. ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಜಾತ್ರೆ ಅಂಗವಾಗಿ ಉಣಕಲ್‌ನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮನೆಯಂಗಳವನ್ನು ಸ್ವಚ್ಛಗೊಳಿಸಿ ರಂಗೋಲಿ ಹಾಕಲಾಗಿತ್ತು. ತೇರು ಸಾಗುವ ಮಾರ್ಗವನ್ನು ಹೂವು–ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.

ಸಂಜೆ ರಥೋತ್ಸವ ಆರಂಭವಾಗುತ್ತಿದ್ದಂತೆ ಭಕ್ತರು ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ರಾಜ್ಯ ಮಾತ್ರವಲ್ಲದೆ ಹೊರರಾಜ್ಯಗಳ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಮಹಾನಗರ ಪಾಲಿಕೆ ಸದಸ್ಯರಾದ ತಿಪ್ಪಣ್ಣ ಮಜ್ಜಗಿ, ರಾಜಣ್ಣ ಕೊರವಿ, ಮಠದ ಅಧ್ಯಕ್ಷ ಶಿವು ಪಾಟೀಲ, ಪಾಲಿಕೆ ಸದಸ್ಯ ಉಮೇಶಗೌಡ ಕೌಜಗೇರಿ, ಬಾಬು ಹೊಟಗಿ, ಹನುಮಂತಪ್ಪ ಮಾಡಳ್ಳಿ, ರಾಮನಗೌಡ ಶೆಟ್ಟಿನಗೌಡ್ರ, ಅಭಿಷೇಕ ಪಾಟೀಲ, ರವಿ ಭೋಸ್ಲೆ, ಗುರುಸಿದ್ದ ಜಾಲಗಾರ, ರಾಜು ಅಡ್ದಉಣಗಿ, ಮಂಜು ಹೊಸಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT