ಸೋಮವಾರ, ಜನವರಿ 24, 2022
18 °C

ಸಿದ್ದರಾಮಯ್ಯರ ಇತ್ತೀಚಿನ ವರ್ತನೆಗಳಿಂದ ಭಾರೀ ಬೇಸರವಾಗುತ್ತಿದೆ: ಸಿಎಂ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮುಖ್ಯಮಂತ್ರಿ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.

ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ತೆರಳುವ ಮೊದಲು ಆದರ್ಶ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯನವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಇತ್ತೀಚೆಗಿನ ಅವರ ಹೇಳಿಕೆಗಳು ಬಹಳ ನಿರಾಸೆ ತಂದಿವೆ’ ಎಂದರು.

’ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಪಕ್ಷದ ಶಾಸಕರು ಹಾಗೂ ಮುಖಂಡರ ಜೊತೆ ಸಭೆ ನಡೆಸುವೆ. ಅಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ ಲಖನ್ ಜಾರಕಿಹೊಳಿ ಸ್ಪರ್ಧೆ ನಮ್ಮ ಮೇಲೆ ಏನೂ ಪರಿಣಾಮ ಬೀರುವುದಿಲ್ಲ’ ಎಂದರು.

‘ರಾಜ್ಯದಲ್ಲಿ ಜಿನೋಮ್‌ ಸೀಕ್ವೆನ್ಸಿಂಗ್‌ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲು ಯೋಜನೆ ರೂಪಿಸಲಾಗಿದ್ದು, ಈ ಕುರಿತು ಪರಿಣತರ ಜೊತೆ ಚರ್ಚಿಸಲಾಗಿದೆ. ಕೇಂದ್ರಗಳ ಹೆಚ್ಚಳಕ್ಕೆ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಆದಷ್ಟು ಬೇಗ ವರದಿ ಮಾಡುವಂತೆ ಮಾಡುತ್ತೇವೆ’ ಎಂದರು.

ಇದನ್ನೂ ಓದಿ: ಸುಳ್ಳು ಹೇಳುವ ಮೂಲಕ ಬಿಜೆಪಿಯ ಮೂಲ ತತ್ವ ಎತ್ತಿ ಹಿಡಿದ ಬೊಮ್ಮಾಯಿ: ಸಿದ್ದರಾಮಯ್ಯ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು