ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಅವನತಿಗೆ ಇಬ್ಬರು ಸಿದ್ದುಗಳು ಕಾರಣ. ಒಬ್ಬರು ಪಂಜಾಬಿನ ಸಿದ್ದು ಮತ್ತೊಬ್ಬರು ರಾಜ್ಯದಲ್ಲಿನ ಸಿದ್ದು (ಸಿದ್ದರಾಮಯ್ಯ) ಎಂದು ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮೋತ್ಸವ ಹೆಸರಿನಲ್ಲಿ ಜನ್ಮದಿನ ಆಚರಿಸಲು ಹೊರಟಿದ್ದಾರೆ. ಇದುವೇ ಕಾಂಗ್ರೆಸ್ ನವರಿಗೆ ದೊಡ್ಡ ವಿಷಯವಾಗಿದೆ. ಅವರಿಗೆ ಜನರ ಸಮಸ್ಯೆಗಳು ಬೇಕಾಗಿಲ್ಲ. ಅದಕ್ಕೆ ಸಮಯವು ಇಲ್ಲ ಎಂದು ಹರಿಹಾಯ್ದರು.

ಸಿದ್ದರಾಮಯ್ಯ ಅವರ ಜನ್ಮದಿನವನ್ನು ಅದ್ದೂರಿಯಾಗಿ ಮಾಡುವುದು ಅವರಿಗೆ ಬಿಟ್ಟ ವಿಚಾರ. ಹಿಂದೆ ಅವರು ಬಾದಾಮಿಯಿಂದ ಸಾವಿರ ಮತಗಳಿಂದ ಗೆದ್ದವರು. ಅಲ್ಲಿ ಏನಾದರೂ ಸೋತ್ತಿದ್ದರೇ ಅವರ ರಾಜಕೀಯ ಜೀವನವೇ ಮುಗಿಯುತ್ತಿತ್ತು. ಅಲ್ಲಿ ಗೆದ್ದರು ಕೂಡಾ ಚಾಮುಂಡೇಶ್ವರಿಯಲ್ಲಿ 30 ಸಾವಿರ ಅಂತರದಿಂದ ಸೋಲು ಕಂಡಿದ್ದಾರೆ. ಇತ್ತ ಒಕ್ಕಲಿಗರ ಮತಗಳ ಮೇಲೆ ಕಣ್ಣಿಟ್ಟಿರುವ ಡಿ.ಕೆ. ಶಿವಕುಮಾರ್, ತಾವು ಮುಖ್ಯಮಂತ್ರಿ ಸ್ಪರ್ಧೆಯಲ್ಲಿರುವುದಾಗಿ ಹೇಳಿದ್ದಾರೆ. ಹಿಂದುಳಿದ ವರ್ಗದವರ ಮತ ನನಗೆ ಬೀಳುತ್ತವೇ ಎಂದು ಸಿದ್ದರಾಮಯ್ಯ ಕೂಡ ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ. ಇವರಿಬ್ಬರ ಒಳ ಹೋರಾಟದಿಂದಲೇ ಕಾಂಗ್ರೆಸ್ ನ ಅವನತಿ ಪ್ರಾರಂಭವಾಗಲಿದೆ ಎಂದರು.

ಸಿದ್ದರಾಮಯ್ಯ ಅವರಿಗೆ ಕ್ಷೇತ್ರದ ಮೇಲೆ ಭರವಸೆ ಇದ್ದರೆ ಬಾದಾಮಿಯಲ್ಲಿಯೇ ನಿಂತು ಗೆದ್ದು ತೋರಿಸಲಿ ಅದು ಬಿಟ್ಟು ಬೇರೆ ಕಡೆಗೆ ಕ್ಷೇತ್ರ ಹುಡುಕುವುದು ಯಾಕೆ? ಅವರಿಗೆ ಸೋಲುವ ಭಯ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಜಿ.ಎಸ್.ಟಿ ವಿಚಾರವಾಗಿ ಮಾತನಾಡಿದ ಅವರು, ಜಿ.ಎಸ್.ಟಿ ಅವಧಿ ವಿಸ್ತರಣೆ ಮತ್ತೊಂದಕ್ಕೆ ಕೌನ್ಸಿಲ್ ಎಂಬುದಿದೆ. ಅಲ್ಲಿ ಎಲ್ಲವೂ ನಿರ್ಧಾರ ಆಗಲಿದೆ. ಎಲ್ಲ ರಾಜ್ಯಗಳ ಸದಸ್ಯರು ಅಲ್ಲಿ ಬಂದಿರುತ್ತಾರೆ. ವಿಸ್ತ್ರತ ಚರ್ಚೆ ಆಗುತ್ತದೆ. ಅಲ್ಲಿ ಯಾಕ ಇವರು ಚರ್ಚೆ ಮಾಡಲಿಲ್ಲ. ಅದು ಬಿಟ್ಟು ಇದೀಗ ಮೊಸರು, ಮಜ್ಜಿಗೆ ಮತ್ತೊಂದಕ್ಕೆ ಬೆಲೆ ಏರಿಕೆ ಮಾಡಲಾಗಿದೆ ಎಂದು ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ಹರಿಹಾಯ್ದರು.

ಮಳೆಯಿಂದ ನಗರದ ರಸ್ತೆಗಳು ಹಾಳಾಗಿವೆ. ಜನರಿಗೆ ಸಮಸ್ಯೆ ಆಗುವ ಕಾರಣಕ್ಕೆ ಅವಸರ ಮಾಡಿ ತಗ್ಗು-ಗುಂಡಿ ಮುಚ್ಚುವ ಕೆಲಸ ಮಾಡಲಾಗಿದೆ. ಇದರಿಂದ ಮತ್ತೆ ಮಳೆಗೆ ರಸ್ತೆ ಹದಗೆಡುವ ಪರಿಸ್ಥಿತಿ ಇರಲಿದೆ. ಹೀಗಾಗಿ ಬಿಸಿಲು ಬೀಳುವವರೆಗೆ ಕಾದು ಕಾಮಗಾರಿಗಳನ್ನು ಗುಣಮಟ್ಟದಿಂದ ಮಾಡಬೇಕೆಂದು ಪಾಲಿಕೆ ಆಯುಕ್ತರಿಗೆ ಈಗಾಗಲೇ ತಿಳಿಸಿದ್ದೇನೆ ಎಂದರು.

ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆಯಾಗಿವೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಕಾಮಗಾರಿ ಕಳಪೆಯಾಗಿದೆ ಎಂಬುದನ್ನು ಜನಪ್ರತಿನಿಧಿಗಳಿಗೆ ತಿಳಿಸುವ ಕೆಲಸ ಆಗಲಿ. ನಾವು ಕೂಡಾ ಸರ್ಕಾರಕ್ಕೆ ತಿಳಿಸುವ ಕೆಲಸ ಮಾಡುವೆ. ಅಲ್ಲದೇ ತನಿಖೆಗೆ ಒತ್ತಾಯಿಸುವೆ. ಕಳಪೆಯಾಗಿದ್ದರೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಶೆಟ್ಟರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.