ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಜಾಗದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹ

Published 20 ಜನವರಿ 2024, 16:25 IST
Last Updated 20 ಜನವರಿ 2024, 16:25 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಎಂ.ಟಿ.ಎಸ್‌ ಕಾಲೊನಿಯಲ್ಲಿರುವ ರೈಲ್ವೆ ಇಲಾಖೆಗೆ ಸೇರಿದ 13 ಎಕರೆ ಜಾಗದಲ್ಲಿ ರೈಲ್ವೆ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೇ ವಿನಹ ಅದನ್ನು ಖಾಸಗಿ ವ್ಯಕ್ತಿಗಳಿಗೆ 99 ವರ್ಷ ಗುತ್ತಿಗೆ ನೀಡಬಾರದು ಎಂದು ನೈರುತ್ಯ ರೈಲ್ವೆ ವಲಯ ಬಳಕೆದಾರರ ಸಲಹಾ ಸಮಿತಿ ಅಧ್ಯಕ್ಷ ಮಹೇಂದ್ರ ಸಿಂಘಿ ಆಗ್ರಹಿಸಿದ್ದಾರೆ.

ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ರೈಲ್ವೆ ಮಂಡಳಿ ಅಧ್ಯಕ್ಷರು ಮತ್ತು ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಅವರು  ಪತ್ರ ಬರೆದಿದ್ದಾರೆ.

ರೈಲ್ವೆ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಿದರೆ ನೈರುತ್ಯ ರೈಲ್ವೆ ವಲಯದ ಸಾವಿರಾರು ನೌಕರರಿಗೆ ಅನುಕೂಲವಾಗಲಿದೆ. ಅಲ್ಲದೆ ನೂರಾರು ಕೋಟಿ ರೂಪಾಯಿ ಬೆಲೆಬಾಳುವ ಜಮೀನು ರೈಲ್ವೆ ಇಲಾಖೆಗೆ ಉಳಿದುಕೊಳ್ಳಲಿದೆ. 2009- 10ನೇ ಸಾಲಿನ ಕೇಂದ್ರ ರೈಲ್ವೆ ಬಜೆಟ್ ನಲ್ಲಿ ಅಂದಿನ ರೈಲ್ವೆ ಸಚಿವೆ ಆಗಿದ್ದ ಮಮತಾ ಬ್ಯಾನರ್ಜಿ ಅವರು ನೈರುತ್ಯ ರೈಲ್ವೆ ವಲಯಕ್ಕೆ ರೈಲ್ವೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದರು. ಆದರೆ ಈವರೆಗೂ ರೈಲ್ವೆ ಮೆಡಿಕಲ್ ಕಾಲೇಜನ್ನು ಸ್ಥಾಪನೆ ಮಾಡಿಲ್ಲ. ಪ್ರಸ್ತಾವಿತ ಮೆಡಿಕಲ್ ಕಾಲೇಜು ಹುಬ್ಬಳ್ಳಿಯಲ್ಲಿ ಸ್ಥಾಪನೆಗೊಂಡು ಅದರ ಸುತ್ತಲಿನ ಜಾಗದಲ್ಲಿ ವಾಣಿಜ್ಯ ಕಟ್ಟಡಗಳನ್ನು ರೈಲ್ವೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಿದರೆ ಮುಂದಿನ ದಿನಗಳಲ್ಲಿ ನೂರಾರು ಕೋಟಿ ರೂಪಾಯಿ ಆದಾಯ ಕೂಡ ಬರಲಿದೆ ಎಂದು ಸಲಹೆ ನೀಡಿದ್ದಾರೆ.

ನೈರುತ್ಯ ರೈಲ್ವೆ ವಲಯ ಸ್ಥಾಪನೆಗೊಂಡು ಎರಡು ದಶಕಗಳೇ ಕಳೆದಿವೆ. ಆದರೂ ಕೂಡ ಇನ್ನೂ ಅನೇಕ ರೈಲ್ವೆ ಇಲಾಖೆ ಕಚೇರಿಗಳು ಹಾಗೂ ರೈಲ್ವೆ ಸಿಬ್ಬಂದಿಗಳು ಮತ್ತು ಪ್ರಯಾಣಿಕರಿಗೆ ಬೇಕಾದ ಹಲವಾರು ಸೌಲಭ್ಯಗಳಿಗೆ ಕಟ್ಟಡಗಳನ್ನು ನಿರ್ಮಿಸಬೇಕಾದ ಅವಶ್ಯಕತೆ ಇದೆ. ಮುಂದಿನ 50 ವರ್ಷಗಳ ಕಾಲ ಹುಬ್ಬಳ್ಳಿ ನಗರ ಸಾಕಷ್ಟು ಪ್ರಮಾಣದಲ್ಲಿ ಬೆಳವಣಿಗೆ ಆಗಲಿದ್ದು, ಅದಕ್ಕೆ ತಕ್ಕಂತೆ ರೈಲ್ವೆ ಇಲಾಖೆ, ಸೌಲಭ್ಯ ಅಭಿವೃದ್ಧಿಪಡಿಸಲು ಹತ್ತಾರು ಎಕರೆ ಭೂಮಿಯ ಅವಶ್ಯಕತೆ ಬೀಳಲಿದೆ. ಹೀಗಾಗಿ ರೈಲ್ವೆ ಇಲಾಖೆ ಈ ಜಾಗವನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಬದಲು  ತನ್ನ ಆಸ್ತಿಯಾಗಿಯೇ ಉಳಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT