ಗಣೇಶ ಮೂರ್ತಿ ಸ್ಥಾಪನೆಗೆ ಏಕಗವಾಕ್ಷಿ ಅನುಮತಿ ಕೇಂದ್ರ

7

ಗಣೇಶ ಮೂರ್ತಿ ಸ್ಥಾಪನೆಗೆ ಏಕಗವಾಕ್ಷಿ ಅನುಮತಿ ಕೇಂದ್ರ

Published:
Updated:
Deccan Herald

ಧಾರವಾಡ: ‘ಗಣಪತಿ ಹಬ್ಬ ಸಮೀಪಿಸುತ್ತಿರುವುದರಿಂದ ಸಾರ್ವಜನಿಕ ಗಣಪತಿ ವಿಗ್ರಹಗಳ ಸ್ಥಾಪನೆಗೆ ಪರವಾನಗಿ ನೀಡಲು ಏಕಗವಾಕ್ಷಿ ಅನುಮತಿ ಕೇಂದ್ರ ಸ್ಥಾಪಿಸಲಾಗುವುದು’ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.

ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದ ಅವರು, ‘ಸೆ. 13ರಂದು ಸಾರ್ವಜನಿಕ ಗಣೇಶ ಮೂರ್ತಿಗಳು ಪ್ರತಿಷ್ಠಾಪನೆಗೊಳ್ಳಲಿವೆ. ಸೆ. 24ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಸಮಾರಂಭಗಳು ನಡೆಯುತ್ತವೆ. ಜಿಲ್ಲೆಯಲ್ಲಿರುವ ಸ್ಥಳೀಯ ಸಂಸ್ಥೆಗಳು, ಮಹಾನಗರ ಪಾಲಿಕೆ, ಗ್ರಾಮ ಪಂಚಾಯ್ತಿ ಸೇರಿದಂತೆ ಆಯಾ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು. ಜತೆಗೆ ಹೆಸ್ಕಾಂ, ಪೊಲೀಸ್ ಅನುಮತಿ ಪಡೆಯುವುದು ಕಡ್ಡಾಯ. ಈ ಎಲ್ಲಾ ಇಲಾಖೆಗಳ ಅನುಮತಿ ಪಡೆಯಲು ಆಯಾ ತಹಶೀಲ್ದಾರ್ ಕಚೇರಿಗಳಲ್ಲಿ ಏಕಗವಾಕ್ಷಿ ಕೇಂದ್ರ ಸ್ಥಾಪಸಲಾಗುವುದು. ಇದರ ರೂಪುರೇಷೆ ಮತ್ತು ಅರ್ಜಿ ನಮೂನೆ ಸಿದ್ಧಪಡಿಸಿ’ ಎಂದು ಜಿಲ್ಲಾ ಪರಿಸರ ಅಧಿಕಾರಿ ವಿಜಯಕುಮಾರ ಕಡಕಭಾವಿ ಅವರಿಗೆ ಸೂಚಿಸಿದರು.

‘ಈಗಾಗಲೇ ರಚಿಸಿರುವ ಜಾಗೃತದಳವು ಪಿಒಪಿ ಮತ್ತು ರಾಸಾಯನಿಕ ಬಣ್ಣ ಬಳಸಿದ ವಿಗ್ರಹಗಳ ತಯಾರಿಕೆ ಕೇಂದ್ರಗಳನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು. ನೀರಿನಲ್ಲಿ ಕರಗುವ, ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನು ಬಳಸಲು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದರು.

‘ಗಣೇಶ ಹಬ್ಬಕ್ಕೂ ಮೊದಲು ಇನ್ನೂ ಒಂದು ಸಭೆ ನಡೆಸಿ, ಅಂತಿಮ ಹಂತದ ಸಿದ್ಧತೆಗಳ ಕುರಿತು ಪರಿಶೀಲಿಸಲಾಗುವುದು. ಜತೆಗೆ ಈ ಬಾರಿ ಪಿಒಪಿ ಮೂರ್ತಿಗಳಿಗೆ ನಿಷೇಧ ಇರುವುದರಿಂದ ಅದರ ಕಟ್ಟುನಿಟ್ಟಿನ ಜಾರಿ ಕುರಿತು ಪರಿಶೀಲನೆ ನಡೆಸಲಾಗುವುದು’ ಎಂದು ಜಿಲ್ಲಾಧಿಕಾರಿ ಹೇಳಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !