ಗುರುವಾರ , ಸೆಪ್ಟೆಂಬರ್ 29, 2022
26 °C

ಹುಬ್ಬಳ್ಳಿ: ಹಳ್ಳದಲ್ಲಿ ಸಿಲುಕಿದ್ದ ಆರು ಮಂದಿ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ತಾಲ್ಲೂಕಿನ ಕಡಪಟ್ಟಿ-ಹಳ್ಯಾಳ ನಡುವಿನ ದೇಸಾಯಿ ಹಳ್ಳದಲ್ಲಿ ಮಂಗಳವಾರ ಸಿಲುಕಿದ್ದ ಆರು ಮಂದಿಯನ್ನು ತಾಲ್ಲೂಕು ಆಡಳಿತವು ಗ್ರಾಮಸ್ಥರ ಸಹಾಯದಿಂದ ರಕ್ಷಿಸಿದೆ.

ರಾತ್ರಿ ಧಾರಾಕಾರವಾಗಿ  ಸುರಿದ ಮಳೆಗೆ ಬೆಣ್ಣೆಹಳ್ಳ, ತುಪ್ಪರಿಹಳ್ಳ ತುಂಬಿ ಹರಿದ ಪರಿಣಾಮ ತಾಲ್ಲೂಕಿನ ಇಂಗಳಹಳ್ಳಿ,‌ ಕಿರೆಸೂರ, ಹೆಬಸೂರ ಗ್ರಾಮದ ಸುಮಾರು ಮೂವತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಕೃಷಿ ಜಮಿನಿಗೂ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಅವರು ಕಿರೆಸೂರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯ್ತಿ ಪಿಡಿಒ ಅವರಿಂದ ಹಾನಿಯ ಮಾಹಿತಿ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.