ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಸರ್ಕಾರಿ ಮಾದರಿ ಗಂಡು ಮಕ್ಕಳ ಶಾಲೆ ನಂ. 1ರಲ್ಲಿ ನೂತನ ಸ್ಮಾರ್ಟ್ ಕ್ಲಾಸ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಜಗದೀಶ ಶೆಟ್ಟರ್ ಅವರು ಸೋಮವಾರ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರ ಎಚ್.ಎಂ. ಕುಂದರಗಿ ಅವರು, 120 ವರ್ಷ ಹಳೆಯದಾದ ಶಾಲೆಗೆ ಹೊಸ ಕಟ್ಟಡ, ಕಾಂಪೌಂಡ್ ಹಾಗೂ ಗುರುನಾಥಾರೂಢರ ಹೆಸರು ನಾಮಕರಣ ಮಾಡುವುದು ಸೇರಿದಂತೆ, ಶಾಲೆಗೆ ಮೂಲಸೌಕರ್ಯ ಒದಗಿಸಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಅದಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ‘ಶಾಲೆಗೆ ಗುರುನಾಥಾರೂಢರ ಹೆಸರು ನಾಮಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಸುಸಜ್ಜಿತ ಸಭಾಂಗಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯೋಜನಾ ವರದಿ ಸಲ್ಲಿಸಿದರೆ ಅಗತ್ಯ ಅನುದಾನ ನೀಡುವೆ. ಸಿಎಸ್ಆರ್ನಡಿ ಶಾಲೆಗೆ ಶೌಚಾಲಯ ಸೇರಿದಂತೆ, ಮೂಲಸೌಕರ್ಯ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು.

ಶಾಲೆಯ ಶಿಕ್ಷಕರಾದ ಎನ್.ಎಸ್. ಸಂಪಗಾವ, ಎಲ್.ಬಿ. ಚುಳಕಿ, ಡಿ.ವಿ. ಭಂಡಾರಿ, ಆರ್.ಬಿ. ಬಿಡದಿ, ಸಿಆರ್ಪಿ ಗಣಪತಿ ನಾಯಕ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಇಬ್ರಾಹಿಂ ಜಮಖಂಡಿ, ಸಿದ್ಧಾರೂಢ ಮಠ ಟ್ರಸ್ಟ್ ಕಮಿಟಿ ಅಧ್ಯಕ್ಷ ಡಿ.ಡಿ. ಮಾಳಗಿ, ಮಹಾನಗರ ಬಿಜೆಪಿ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಮುಖಂಡರಾದ ಪಾಂಡುರಂಗ ಪಾಟೀಲ ಹಾಗೂ ರಾಧಾಬಾಯಿ ಸಫಾರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.