ತನಿಖೆ ನಡೆಸಿ ಆದಷ್ಟು ಬೇಗ ವರದಿ ನೀಡಲು ಸದನ ಸಮಿತಿಗೆ ಸೂಚಿಸಲಾಗಿತ್ತು. ವರದಿ ಸಲ್ಲಿಸಿದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು
ರಾಮಪ್ಪ ಬಡಿಗೇರ ಮೇಯರ್ ಹು–ಧಾ ಮಹಾನಗರ ಪಾಲಿಕೆ
ಯೋಜನೆಗೆ ಸಂಬಂಧಿಸಿದಂತೆ ಸದನ ಸಮಿತಿ ಕೇಳಿದ ಅಗತ್ಯ ದಾಖಲೆ ನೀಡುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ
ರುದ್ರೇಶ ಘಾಳಿ ಆಯುಕ್ತ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ
ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದ್ದು ಅಧಿಕಾರಿಗಳಿಂದ ದಾಖಲೆ ಪಡೆದು ಶೀಘ್ರ ಮೇಯರ್‌ಗೆ ಅಂತಿಮ ವರದಿ ಸಲ್ಲಿಸಲಾಗುವುದು
ವೀರಣ್ಣ ಸವಡಿ ಅಧ್ಯಕ್ಷ ಸದನ ಸಮಿತಿ
ಅಧಿಕಾರಿಗಳು ಮಾಹಿತಿ ಕೊಡದಿರುವುದನ್ನು ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು. ಸ್ಮಾರ್ಟ್ ಸಿಟಿ ಪಾಲಿಕೆ ಅಧಿಕಾರಿಗಳು ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂದು ಮೇಯರ್‌ಗೆ ವರದಿ ಸಲ್ಲಿಸಲಾಗುವುದು