ಧಾರವಾಡ: ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜೆ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಅವರಿಗೆ ಸ್ಥಳ ನಿಯುಕ್ತಿ ಮಾಡಿಲ್ಲ. ರಾಷ್ಟ್ರೀಯ ಜೀವನೋಪಾಯ ಮಿಷನ್ ನಿರ್ದೇಶಕಿ ಸ್ನೇಹಲ್ ಆರ್. ಅವರನ್ನು ಧಾರವಾಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

2024 ಜ.27ರಂದು ಧಾರವಾಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ದಿವ್ಯಪ್ರಭು. ಕೆಲ ದಿನಗಳಿಂದ ರಜೆಯಲ್ಲಿದ್ದರು. ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ ಮಿಷನ್ ವಿದ್ಯಾಕಾಶಿ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಿದ್ದರು. ಸ್ನೇಹಲ್ ಆರ್.ಅವರು 2013ನೇ ಬ್ಯಾಚ್ನ ಐಎಎಸ್ ಅಧಿಕಾರಿ. ಮನಃಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಚಿಕ್ಕಮಗಳೂರು ಉಪವಿಭಾಗಾಧಿಕಾರಿ, ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ, ಪಿಯು ಶಿಕ್ಷಣ ಮಂಡಳಿ ನಿರ್ದೇಶಕಿ, ಯಾದಗಿರಿ ಜಿಲ್ಲಾಧಿಕಾರಿ, ಬಿಎಂಟಿಸಿ ಐಟಿ ವಿಭಾಗದ ನಿರ್ದೇಶಕಿ, ಬಿಬಿಎಂಪಿ ಪಶ್ಚಿಮ ವಲಯ ಆಯಕ್ತರಾಗಿ ಕಾರ್ಯನಿರ್ವಹಿಸಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.