ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ, ಗದಗ ನಿಲ್ದಾಣದಲ್ಲಿ ಸೌರಶಕ್ತಿಯ ‘ಬೆಳಕು’

ಕಳೆದ ವರ್ಷ ₹1.78 ಕೋಟಿ ವಿದ್ಯುತ್‌ ಬಿಲ್‌ ಉಳಿತಾಯ
Last Updated 9 ಅಕ್ಟೋಬರ್ 2020, 16:35 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರೈಲ್ವೆ ಮತ್ತು ಉತ್ಪಾದನಾ ಘಟಕಗಳಲ್ಲಿ 2021-22ರ ವೇಳೆಗೆ ಸುಮಾರು 1,000 ಮೆಗಾವ್ಯಾಟ್ ಸೌರಶಕ್ತಿ, ಸುಮಾರು 200 ಮೆಗಾವ್ಯಾಟ್ ಪವನ ಶಕ್ತಿಯನ್ನು ಉತ್ಪಾದಿಸಲು ಭಾರತೀಯ ರೈಲ್ವೆ ಯೋಜನೆ ರೂಪಿಸಿದೆ. ಇದಕ್ಕಾಗಿ ನೈರುತ್ಯ ರೈಲ್ವೆಯೂ ತನ್ನ ವ್ಯಾಪ್ತಿಯಲ್ಲಿಸೌರಶಕ್ತಿಯ ‘ಬೆಳಕು’ ಪ್ರಜ್ವಲಿಸಲು ಸಿದ್ಧತೆ ಮಾಡಿಕೊಂಡಿದೆ.

ಹುಬ್ಬಳ್ಳಿ, ಹೊಸಪೇಟೆ, ಗದಗ ಮತ್ತು ಬಳ್ಳಾರಿ ನಿಲ್ದಾಣಗಳ ಏಳು ಸೇವಾ ಕಟ್ಟಡಗಳಲ್ಲಿ ಸೌರಶಕ್ತಿ ಸಂಗ್ರಹ ಮಾಡಲಾಗುತ್ತಿದೆ. ಇಲ್ಲಿನ ಗದಗ ರಸ್ತೆಯಲ್ಲಿರುವ ರೈಲ್‌ ಸೌಧ, ಹುಬ್ಬಳ್ಳಿ ವಿಭಾಗೀಯ ಕಚೇರಿ, ವ್ಯವಸ್ಥಾಪಕರ ಕಚೇರಿ,ರೈಲ್ವೆ ಆಸ್ಪತ್ರೆ, ಲೆವಲ್ ಕ್ರಾಸಿಂಗ್‌ಗಳಲ್ಲಿವಿದ್ಯುತ್ ಉತ್ಪಾದನೆ ಪ್ರಕ್ರಿಯೆ ಜಾರಿಯಲ್ಲಿದೆ.

ನೈರುತ್ಯ ರೈಲ್ವೆ ಟ್ರ್ಯಾಕ್‌ನ ಅಕ್ಕಪಕ್ಕದ ಜಮೀನುಗಳಲ್ಲಿ ಮತ್ತು ಖಾಲಿ ಇರುವ ಭೂಮಿಯಲ್ಲಿ ಸೌರ ಸ್ಥಾವರಗಳನ್ನು ಸ್ಥಾಪಿಸಿ ವಿದ್ಯುತ್‌ ಉತ್ಪಾದಿಸುವ ಯೋಜನೆ ಹಾಕಿಕೊಂಡಿದೆ. ಖಾಲಿ ಭೂಮಿಯಲ್ಲಿ 20ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಕಾರ್ಯಕ್ಕೆ ಟೆಂಡರ್ ಕೂಡ‌ ನೀಡಲಾಗಿದೆ. ವಿದ್ಯುತ್‌ ಉತ್ಪಾದನೆಗೆ ಅವಕಾಶವಿರುವ ಮತ್ತಷ್ಟು ಸ್ಥಳಗಳು ಮತ್ತು ಘಟಕಗಳನ್ನು ಸ್ಥಾಪಿಸಲು ಭೂಮಿ ಪರಿಶೀಲನೆಗೆ ಕ್ರಮ ಕೈಗೊಳ್ಳಬೇಕು ಎಂದುರೈಲ್ವೆ ಇಂಧನ ನಿರ್ವಹಣಾ ಕಂಪನಿ ಲಿಮಿಟೆಡ್‌ಗೆ (ಆರ್‌ಇಎಂಸಿಎಲ್‌) ಸೂಚಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯಾ ತಿಳಿಸಿದ್ದಾರೆ.

ಸೌರಶಕ್ತಿ ಮತ್ತು ಪವನಶಕ್ತಿ ಮೂಲಕ ಉತ್ಪಾದಿಸಿದ ವಿದ್ಯುತ್‌ ಬಳಕೆ ಮಾಡಿದ್ದರಿಂದ ನೈರುತ್ಯ ರೈಲ್ವೆಗೆ ಕಳೆದ ವರ್ಷ ₹1.78 ಕೋಟಿ ವಿದ್ಯುತ್‌ ಬಿಲ್‌ ಉಳಿತಾಯವಾಗಿತ್ತು. ಈ ಸಲದ ಹಣಕಾಸು ವರ್ಷದಲ್ಲಿ ₹1.88 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT