ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಸಮಸ್ಯೆಗೆ ಸ್ಪಂದಿಸಲು ಸೂಚನೆ

ಹಣಕ್ಕೆ ಬೇಡಿಕೆ ಇಟ್ಟರೆ ಕಠಿಣ ಕ್ರಮ: ಸಚಿವ ಎಚ್ಚರಿಕೆ
Last Updated 22 ಜೂನ್ 2022, 2:06 IST
ಅಕ್ಷರ ಗಾತ್ರ

ನವಲಗುಂದ: ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವರು, ‘ನಿಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರದ ಕುರಿತು ರೈತರು ಹಾಗೂ ಸಾರ್ವಜನಿಕರು ದೂರು ನೀಡಿದ್ದಾರೆ. ಉತಾರ, ಖರೀದಿ ಪತ್ರ, ಋಣಭಾರ ಪತ್ರ, ನೋಂದಣಿ ಪತ್ರ, ಹೊಲದ ಖರೀದಿ ಸಮಯದಲ್ಲಿ ತೊಂದರೆ ಆಗುತ್ತಿರುವುದಾಗಿ ತಿಳಿಸಿದ್ದಾರೆ. ರೈತರು ಕಚೇರಿಗೆ ಬಂದಾಗ ತಡಮಾಡದೆ ಕೆಲಸ ಮಾಡಿಕೊಡಿ. ಹಣಕ್ಕೆ ಬೇಡಿಕೆ ಇಟ್ಟರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಕಾಮಗಾರಿಗಳು ತ್ವರಿತಗತಿಯಲ್ಲಿ ಆಗಬೇಕು. ಕೆಲಸ ವಿಳಂಬ ಮಾಡುವ ಗುತ್ತಿಗೆದಾರರ ಪರವಾನಗಿ ರದ್ದುಮಾಡಿ ಕಪ್ಪುಪಟ್ಟಿಗೆ ಸೇರಿಸಬೇಕಾಗುತ್ತದೆ’ ಎಂದರು.

ನವಲಗುಂದ ಪಶು ಆಸ್ಪತ್ರೆ ಸ್ಥಳಾಂತರಕ್ಕೆ ಜಾಗ ಹಾಗೂ ಖಾಲಿ ಇರುವವೈದ್ಯರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲು ತಹಶೀಲ್ದಾರ್ ಅನಿಲ ಬಡಿಗೇರ ಅವರಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT