ಮಂಗಳವಾರ, ಜನವರಿ 19, 2021
17 °C

ವಿಡಿಯೊ: ಗೋವಾದಲ್ಲಿ ಸೈಕಲ್ ಹೊಡೆಯುತ್ತಿರುವ ‌ಸೋನಿಯಾ ಗಾಂಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಅನಾರೋಗ್ಯ ಕಾರಣದಿಂದ ಗೋವಾಕ್ಕೆ ವಿಶ್ರಾಂತಿ ಪಡೆಯಲು ತೆರಳಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೈಕಲ್ ಹೊಡೆಯುತ್ತಿರುವ‌‌ ವಿಡಿಯೊ ವಾಟ್ಟ್‌ಆ್ಯಪ್‌ನಲ್ಲಿ ವೈರಲ್ ಆಗಿದೆ.

ಕಾಂಗ್ರೆಸ್ ಯುವ ಮುಖಂಡರೊಬ್ಬರು ಈ ವಿಡಿಯೊ ಹಂಚಿಕೊಂಡಿದ್ದು, ಬಹುತೇಕ ವಾಟ್ಸ್‌ಆ್ಯಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿರುವ ಕಾರಣ, ದೀರ್ಘಕಾಲದ ಎದೆಯ ಸೋಂಕಿನಿಂದ ಬಳಲುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿಯವರಿಗೆ ದೆಹಲಿ ತೊರೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಸೋನಿಯಾ ಗಾಂಧಿ ಅವರು ಗೋವಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

‘ಕಳೆದ ಆಗಸ್ಟ್‌ನಲ್ಲಿ ಅನಾರೋಗ್ಯದಿಂದಾಗಿ  ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ದೆಹಲಿಯಲ್ಲಿ ಉಂಟಾಗುತ್ತಿರುವ ವಾಯುಮಾಲಿನ್ಯ, ಸೋನಿಯಾ ಅವರಲ್ಲಿರುವ ಅಸ್ತಮಾ ಮತ್ತು ಎದೆಯ ಸೋಂಕಿನ ತೀವ್ರತೆ ಹೆಚ್ಚಿಸುವ ಸಾಧ್ಯತೆ ಇರುವುದರಿಂದ, ವೈದ್ಯರು ಅವರನ್ನು ದೆಹಲಿಯಿಂದ ಬೇರೆಡೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಗೋವಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು