ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈರುತ್ಯ ರೈಲ್ವೆ: ₹217.47 ಕೋಟಿ ಆದಾಯ ಸಂಗ್ರಹ

Last Updated 8 ಜೂನ್ 2022, 16:11 IST
ಅಕ್ಷರ ಗಾತ್ರ

ಹುಬ್ಬಳ್ಳಿ:ನೈರುತ್ಯ ರೈಲ್ವೆಗೆ ಮೇ ತಿಂಗಳಲ್ಲಿ ಪ್ರಯಾಣಿಕರಿಂದ ₹217.47 ಕೋಟಿ ಆದಾಯ ಸಂಗ್ರಹಿಸಿದೆ. ನಿರ್ದಿಷ್ಟ ತಿಂಗಳಲ್ಲಿ ಇಷ್ಟೊಂದು ಸಂಗ್ರಹವಾಗಿರುವುದು ಇದೇ ಮೊದಲು. ‌

ಮಾರ್ಚ್‌ನಲ್ಲಿ ₹203.22 ಕೋಟಿ ಆದಾಯ ಸಂಗ್ರಹವಾಗಿತ್ತು. ಮೇ ತಿಂಗಳಲ್ಲಿ 16 ಹೆಚ್ಚುವರಿ ರೈಲುಗಳನ್ನು ಓಡಿಸಲಾಗಿತ್ತು.250 ಹೆಚ್ಚುವರಿ ಕೋಚ್‌ಗಳನ್ನು ಅಳವಡಿಸಲಾಗಿತ್ತು. ಇದರಿಂದಾಗಿ ಹೆಚ್ಚು ಮಂದಿ ಪ್ರಯಾಣಿಸಲು ಅನುಕೂಲವಾಯಿತು.

ಬೇಸಿಗೆ ರಜೆ ಹಾಗೂ ಹಬ್ಬಗಳನ್ನು ಗಮನದಲ್ಲಿರಿಸಿಕೊಂಡು, ಸಾಮಾನ್ಯ ಎರಡನೇ ದರ್ಜೆಯ ಎಲ್ಲಾ ಬೋಗಿಗಳನ್ನು ಜೂನ್‌ 1ರಿಂದ ಅನ್ವಯವಾಗುವಂತೆ ಕಾಯ್ದಿರಿಸಲಾಗಿದೆ. 23 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿಯಾಗಿ 24 ಬೋಗಿಗಳನ್ನು ಅಳವಡಿಸಲಾಗಿದೆ. ಮುಂದೆ 48 ರೈಲುಗಳಿಗೆ ಶಾಶ್ವತವಾಗಿ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುವುದು ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT